
ಚಿಕ್ಕಮಗಳೂರು, 12 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಪಕ್ಷದೊಳಗಿನ ಕೆಲವು ವಿರೋಧಿ ಚಟುವಟಿಕೆಗಳು ನಡೆದಿದ್ದರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವುದು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.
ಪಕ್ಷವಿರೋಧಿಗಳ ರಾಜೀನಾಮೆ ಕುರಿತಂತೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ ಅಹ್ಮದ ಅವರಿಂದ ಇದುವರೆಗೆ ಯಾವುದೇ ರಾಜೀನಾಮೆ ಪತ್ರ ಬಂದಿಲ್ಲ. ಆದರೆ ಮುಂದೆ ನೀಡಬಹುದೇನೋ ಎಂಬ ಸಾಧ್ಯತೆಯನ್ನು ತಳ್ಳಿಹಾಕಲಾಗುವುದಿಲ್ಲ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷ ಸೋಲನ್ನು ಒಪ್ಪಿಕೊಂಡಿಲ್ಲ ಮತ್ತು ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ಅವರು ಸ್ಪಷ್ಟಪಡಿಸಿದರು. ಪಕ್ಷದ ಮುಖಂಡ ಸಲೀಂ ಅಹ್ಮದ ಅವರು ಪಕ್ಷದೊಳಗಿನ ಕೆಲವು ಅಸಮಾಧಾನಗಳನ್ನು ಮಾತ್ರ ವ್ಯಕ್ತಪಡಿಸಿದ್ದಾರೆಯೇ ಹೊರತು, ಪಕ್ಷ ಸೋಲುತ್ತದೆ ಎಂದು ಹೇಳಿಲ್ಲ ಎಂದು ತಿಳಿಸಿದರು.
ಪಕ್ಷವಿರೋಧಿ ಚಟುವಟಿಕೆಗಳ ನಡುವೆಯೂ ಕಾಂಗ್ರೆಸ್ ಸಂಘಟಿತವಾಗಿ ಕಾರ್ಯನಿರ್ವಹಿಸಿದ್ದು ಉಪಚುನಾವಣೆಯಲ್ಲಿ ಜಯ ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa