
ಚಿಕ್ಕಮಗಳೂರು, 12 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಪ್ರವಾಸಿಗರಿಗೆ ಕರ್ನಾಟಕ ಸುರಕ್ಷಿತ ತಾಣವಲ್ಲ ಎಂಬ ಕೇರಳ ರಾಜ್ಯದಿಂದ ಕೇಳಿಬಂದಿರುವ ಟೀಕೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಕೇರಳದ ಬಾಲಕಿ ಚಿಕ್ಕಮಗಳೂರಿಗೆ ಬಂದು ಮೃತಪಟ್ಟಿರುವ ಘಟನೆ ಕುರಿತು ಪ್ರತಿಕ್ರಿಯಿಸಿದ ಅವರು, ಆ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಲಾಗುವುದು ಎಂದು ತಿಳಿಸಿದರು.
ಆದರೆ, ಕರ್ನಾಟಕ ರಾಜ್ಯ ಪ್ರವಾಸಿಗರಿಗೆ ಸುರಕ್ಷಿತವಲ್ಲ ಎನ್ನುವುದು ಸತ್ಯಕ್ಕೆ ದೂರವಾದ ಮಾತು ಎಂದು ಸ್ಪಷ್ಟಪಡಿಸಿದರು. ರಾಜ್ಯದಲ್ಲಿ ಪ್ರವಾಸೋದ್ಯಮ ಕ್ಷೇತ್ರಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತಿದ್ದು, ಪ್ರವಾಸಿಗರ ಸುರಕ್ಷತೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa