ಏ. 15ರಂದು ಆದಿಚುಂಚನಗಿರಿ ಕ್ಷೇತ್ರಕ್ಕೆ ಪ್ರಧಾನಿ ಮೋದಿ ಭೇಟಿ ; ಸಿದ್ದತೆ ಪರಿಶೀಲಿಸಿದ ಕುಮಾರಸ್ವಾಮಿ
ಮಂಡ್ಯ, 12 ಏಪ್ರಿಲ್ (ಹಿ.ಸ.) : ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 15ರಂದು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿರುವ ಆದಿಚುಂಚನಗಿರಿ ಮಠದಲ್ಲಿ ನೂತನವಾಗಿ ನಿರ್ಮಿಸಲಾದ ಶ್ರೀ ಗುರು ಬಾಲಗಂಗಾಧರನಾಥ ಸ್ವಾಮೀಜಿಯವರ ಭೈರವೈಕ್ಯ ಮಂದಿರದ ಪೀಠದ ಉದ್ಘಾಟನೆ (ಪ್ರಾಣ ಪ್ರತಿಷ್ಠಾ) ಸಮಾರಂಭದ
Visit


ಮಂಡ್ಯ, 12 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 15ರಂದು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿರುವ ಆದಿಚುಂಚನಗಿರಿ ಮಠದಲ್ಲಿ ನೂತನವಾಗಿ ನಿರ್ಮಿಸಲಾದ ಶ್ರೀ ಗುರು ಬಾಲಗಂಗಾಧರನಾಥ ಸ್ವಾಮೀಜಿಯವರ ಭೈರವೈಕ್ಯ ಮಂದಿರದ ಪೀಠದ ಉದ್ಘಾಟನೆ (ಪ್ರಾಣ ಪ್ರತಿಷ್ಠಾ) ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಈ ಹಿನ್ನೆಲೆಯಲ್ಲಿ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಸ್ಥಳಕ್ಕೆ ಭೇಟಿ ನೀಡಿ ಪೂರ್ವಸಿದ್ಧತಾ ವ್ಯವಸ್ಥೆಗಳನ್ನು ಪರಿಶೀಲಿಸಿದರು.

ಪೂಜ್ಯ ನಿರ್ಮಲಾನಂದನಾಥ ಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ಸಮಗ್ರ ಸಿದ್ಧತೆಗಳ ಬಗ್ಗೆ ಚರ್ಚೆ ನಡೆಸಿ, ಕಾರ್ಯಕ್ರಮ ಯಶಸ್ವಿಗೆ ಅಗತ್ಯ ಕ್ರಮಗಳ ಕುರಿತು ಸಮಾಲೋಚನೆ ನಡೆಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande