
ಚಿಕ್ಕಮಗಳೂರು, 12 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಮಲೆನಾಡು ಪ್ರದೇಶಗಳಲ್ಲಿ ರೆಸಾರ್ಟ್ಗಳಿಗೆ ಅನಿಯಂತ್ರಿತ ಅನುಮತಿ ನೀಡಲಾಗುತ್ತಿದ್ದು, ಅರಣ್ಯವಾಸಿಗಳಿಗೆ ಹಕ್ಕುಪತ್ರ ನೀಡಲಾಗುತ್ತಿಲ್ಲ ಎಂಬ ಆರೋಪಗಳ ಕುರಿತು ಶೀಘ್ರದಲ್ಲೇ ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಚಿಕ್ಕಮಗಳೂರಿನಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಅರಣ್ಯ ಇಲಾಖೆಯಿಂದ ಹಕ್ಕುಪತ್ರ ವಿತರಣೆ ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಸಮಗ್ರವಾಗಿ ಪರಿಶೀಲನೆ ನಡೆಸಲು ಸಭೆ ಕರೆದಿಕೊಳ್ಳಲಾಗುವುದು ಎಂದರು.
ಅರಣ್ಯವಾಸಿಗಳ ಹಕ್ಕುಗಳನ್ನು ರಕ್ಷಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಹೇಳಿದ ಸಿಎಂ, ಸಂಬಂಧಿತ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಸೂಕ್ತ ನಿರ್ಧಾರಗಳನ್ನು ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa