
ನವದೆಹಲಿ, 12 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಬಿಹಾರದಲ್ಲಿ ಮುಖ್ಯಮಂತ್ರಿ ಹುದ್ದೆಯ ರಾಜಕೀಯ ಚಟುವಟಿಕೆ ಗರಿಗೆದರಿರುವ ನಡುವೆ, ಭಾರತೀಯ ಜನತಾ ಪಕ್ಷವು ಮಹತ್ವದ ಹೆಜ್ಜೆ ಇಟ್ಟಿದ್ದು, ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಪಕ್ಷದ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆಗೆ ವೀಕ್ಷಕರಾಗಿ ನೇಮಿಸಿದೆ.
ಬಿಜೆಪಿ ಸಂಸದೀಯ ಮಂಡಳಿ ಭಾನುವಾರ ಪ್ರಕಟಣೆ ಹೊರಡಿಸಿ, ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವರಾಗಿರುವ ಚೌಹಾಣ್ ಅವರಿಗೆ ಈ ಜವಾಬ್ದಾರಿ ನೀಡಲಾಗಿದೆ ಎಂದು ತಿಳಿಸಿದೆ. ಅವರ ಸಮ್ಮುಖದಲ್ಲಿ ಬಿಹಾರ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಹೊಸ ನಾಯಕನ ಆಯ್ಕೆ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ.
ಇದೇ ವೇಳೆ, ನಿತೀಶ್ ಕುಮಾರ್ ಅವರು ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆ, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿರುವ ಹಿನ್ನೆಲೆಯಲ್ಲಿ ಬಿಹಾರ ರಾಜಕೀಯದಲ್ಲಿ ಹೊಸ ಸಮೀಕರಣಗಳಿಗೆ ದಾರಿ ಮಾಡಿಕೊಡುವ ಸಾಧ್ಯತೆ ಇದೆ.
ಬಿಜೆಪಿ ಮತ್ತು ಜೇಡಿಯು ಶಾಸಕರ ಮಹತ್ವದ ಸಭೆ ಇಂದು ಮುಖ್ಯಮಂತ್ರಿ ನಿವಾಸದಲ್ಲಿ ನಡೆಯಲಿದ್ದು, ಮುಂದಿನ ರಾಜಕೀಯ ಬೆಳವಣಿಗೆಗಳ ಕುರಿತು ಸ್ಪಷ್ಟ ಚಿತ್ರಣ ಸಿಗುವ ನಿರೀಕ್ಷೆಯಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa