ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ತರಬೇತಿ
ಕೊಪ್ಪಳ, 13 ಏಪ್ರಿಲ್ (ಹಿ.ಸ.) : ಆ್ಯಂಕರ್ : ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆ (ರಿ), ಹಳಿಯಾಳ ವತಿಯಿಂದ 12 ದಿನಗಳವರೆಗೆ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ತರಬೇತಿ ಪ್ರಾರಂಭವಾಗಲಿದ್ದು, ಅರ್ಜಿ ಆಹ್ವಾನಿಸಲಾಗಿದೆ. 18 ರಿಂದ 50 ವಯೊಮಿತಿಯ ಗ್ರಾಮೀಣ ಭಾಗದ ಕೃಷಿ ಚುವಟಿಕೆ
ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ತರಬೇತಿ


ಕೊಪ್ಪಳ, 13 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆ (ರಿ), ಹಳಿಯಾಳ ವತಿಯಿಂದ 12 ದಿನಗಳವರೆಗೆ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ತರಬೇತಿ ಪ್ರಾರಂಭವಾಗಲಿದ್ದು, ಅರ್ಜಿ ಆಹ್ವಾನಿಸಲಾಗಿದೆ.

18 ರಿಂದ 50 ವಯೊಮಿತಿಯ ಗ್ರಾಮೀಣ ಭಾಗದ ಕೃಷಿ ಚುವಟಿಕೆಗಳಲ್ಲಿ ಆಸಕ್ತಿ ಇರುವ ರೈತ ಯುವಕ ಅಥವಾ ಯುವತಿಯರಿಗಾಗಿ 2026 ಎಪ್ರಿಲ್ ಕೋನೆಯ ವಾರದಲ್ಲಿ 12 ದಿನಗಳ ವರೆಗೆ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ತರಬೇತಿ ಪ್ರಾರಂಭಿಸಲಾಗುತ್ತಿದ್ದು, ತರಬೇತಿಯು ಊಟ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿರುತ್ತದೆ.

ಸ್ವಯಂ ಉದ್ಯೋಗ ಮಾಡಲು ಈ ತರಬೇತಿಯು ಅನುಕೂಲವಾಗಲಿದ್ದು, 18 ರಿಂದ 50 ವಯಸ್ಸಿನ ಒಳಗಿರುವ ಆಸಕ್ತರು ಅರ್ಜಿ ಸಲ್ಲಿಸಬಹುದು.

ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುವುದು.

ಈ ತರಬೇತಿಯಲ್ಲಿ ಕೌಶಲ್ಯ, ಸಾಧನಾ ಪ್ರೇರಣಾ ತರಬೇತಿ, ಉದ್ಯಮಶಿಲತೆಯ ದಕ್ಷ ಗುಣಗಳು, ಹೊಸ ಉದ್ಯಮದ ಸ್ಥಾಪನೆ ಬಗ್ಗೆ ಮಾಹಿತಿ, ಮಾರುಕಟ್ಟೆ ಸಮೀಕ್ಷೆ, ಮಾರಾಟದ ತಂತ್ರಗಳು, ಯಶಸ್ವಿ ಉದ್ಯಮಗಳಿಂದ ಅನುಭವ ಹಂಚಿಕೆ, ಕ್ಷೇತ್ರ ಭೇಟಿ, ಸಾಫ್ಟ್ ಸ್ಕಿಲ್ಸ್, ಯೋಗ ತರಬೇತಿ ಹಾಗೂ ಬ್ಯಾಂಕಿನಿಂದ ಸಾಲ ಪಡೆದು ಸ್ವ-ಉದ್ಯೋಗ ಪ್ರಾರಂಭಿಸಲು ಬೇಕಾಗುವ ಜ್ಞಾನ, ಸರಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಇನ್ನಿತರ ಮಾಹಿತಿಗಳನ್ನು ಉಚಿತವಾಗಿ ನೀಡಲಾಗುವುದು.

ತರಬೇತಿಯಲ್ಲಿ ಭಾಗವಹಿಸುವವರು ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆ, ಹಳಿಯಾಳ, ಉತ್ತರ ಕನ್ನಡ ಜಿಲ್ಲೆ ಈ ವಿಳಾಸಕ್ಕೆ ಸಂಪರ್ಕಿಸಲು ಹಾಗೂ ಸಂಸ್ಥೆಯ ದೂರವಾಣಿ ಸಂಖ್ಯೆ: 8970145354 ಹಾಗೂ 9483485489 ಗೆ ಅಥವಾ ಆನ್ಲೈನ್ ವೆಬ್ಸೈಟ್ www.rsetihaliyal.org ಗೆ ಅರ್ಜಿ ಸಲ್ಲಿಸಬಹುದು ಎಂದು ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande