
ಬೆಂಗಳೂರು, 13 ಏಪ್ರಿಲ್ (ಹಿ.ಸ.):
ಆ್ಯಂಕರ್:
ವಿಕಾಸಸೌಧದ ಕಚೇರಿಯಲ್ಲಿ ಇಂದು ತೈಪೆ ಎಕನಾಮಿಕ್ ಅಂಡ್ ಕಲ್ಚರಲ್ ಸೆಂಟರ್ನ ಪ್ರತಿನಿಧಿಗಳೊಂದಿಗೆ ಮಹತ್ವದ ಮಾತುಕತೆ ನಡೆಯಿತು. ತೈಪೆ ಎಕನಾಮಿಕ್ ಅಂಡ್ ಕಲ್ಚರಲ್ ಸೆಂಟರ್ನ ಡೈರೆಕ್ಟರ್ ಜನರಲ್ ಸ್ಟೀಫನ್ ಎಸ್.ಸಿ. ಹ್ಸು ಅವರು ಸಚಿವ ದಿನೇಶ್ ಗುಂಡೂರಾವ್ ಅವರನ್ನು ಭೇಟಿಯಾದರು.
ಸೌಹಾರ್ದಯುತವಾಗಿ ನಡೆದ ಈ ಭೇಟಿಯಲ್ಲಿ ತೈವಾನ್ ಮತ್ತು ಕರ್ನಾಟಕ ರಾಜ್ಯದ ನಡುವಿನ ಪರಸ್ಪರ ಸಹಕಾರ, ಆರ್ಥಿಕ ಹಾಗೂ ಸಾಂಸ್ಕೃತಿಕ ಸಂಬಂಧಗಳನ್ನು ಇನ್ನಷ್ಟು ಬಲಪಡಿಸುವ ಕುರಿತು ಚರ್ಚೆ ನಡೆಯಿತು. ಉಭಯ ಪಕ್ಷಗಳು ಭವಿಷ್ಯದಲ್ಲಿ ವ್ಯಾಪಾರ, ಹೂಡಿಕೆ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ಸಹಕಾರ ವೃದ್ಧಿಸುವ ಸಾಧ್ಯತೆಗಳ ಕುರಿತು ಅಭಿಪ್ರಾಯ ವಿನಿಮಯ ಮಾಡಿಕೊಳ್ಳಲಾಯಿತು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa