
ಬೆಂಗಳೂರು, 13 ಏಪ್ರಿಲ್ (ಹಿ.ಸ.) :
ಆ್ಯಂಕರ್ : 1919ರ ಜಲಿಯನ್ ವಾಲಾಬಾಗ್ ಹತ್ಯಾಕಾಂಡವನ್ನು ಸ್ಮರಿಸಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹುತಾತ್ಮರಿಗೆ ಗೌರವ ಸಲ್ಲಿಸಿದ್ದಾರೆ.
“1919 ರ ಜಲಿಯನ್ ವಾಲಾಬಾಗ್ ಹತ್ಯಾಕಾಂಡವು ನಮ್ಮ ಇತಿಹಾಸದ ಕರಾಳ ಅಧ್ಯಾಯಗಳಲ್ಲಿ ಒಂದಾಗಿದೆ. ನೂರಾರು ನಿರಾಯುಧ ಪುರುಷರು, ಮಹಿಳೆಯರು ಮತ್ತು ಮಕ್ಕಳನ್ನು ಕ್ರೂರವಾಗಿ ಹತ್ಯೆಗೈಯಲಾಗಿದ್ದು, ಇದು ದೇಶದ ಆತ್ಮಸಾಕ್ಷಿಯ ಮೇಲೆ ಆಳವಾದ ಗಾಯವನ್ನು ಬಿಟ್ಟುಹೋಯಿತು,” ಎಂದು ಅವರು ಹೇಳಿದ್ದಾರೆ.
“ಸ್ವಾತಂತ್ರ್ಯ ಮತ್ತು ಘನತೆಗಾಗಿ ಭಾರತದ ಸಾಮೂಹಿಕ ಸಂಕಲ್ಪವನ್ನು ಬಲಪಡಿಸಿದ ತ್ಯಾಗ ಮಾಡಿದ ಹುತಾತ್ಮರನ್ನು ನಾವು ಕೃತಜ್ಞತೆಯಿಂದ ಸ್ಮರಿಸುತ್ತೇವೆ,” ಎಂದು ಅವರು ತಮ್ಮ ಎಕ್ಸ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.
ಈ ಹತ್ಯಾಕಾಂಡವು ಭಾರತೀಯ ಸ್ವಾತಂತ್ರ್ಯ ಹೋರಾಟದ ದಿಕ್ಕು ತಿರುಗಿಸಿದ ಘಟನೆಯಾಗಿದ್ದು, ದೇಶದ ಇತಿಹಾಸದಲ್ಲಿ ಅಚ್ಚಳಿಯದ ಗುರುತು ಮೂಡಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa