
ಬೆಂಗಳೂರು, 13 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಸಂಸತ್ತು ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಕಲ್ಪಿಸುವ ‘ನಾರಿಶಕ್ತಿ ವಂದನಾ ಅಧಿನಿಯಮ-2026’ ಜಾರಿಗೆ ಅಂತಿಮ ಹಂತ ತಲುಪಿದ್ದು, ದೇಶದಲ್ಲಿ ಮಹಿಳಾ ಸಬಲೀಕರಣಕ್ಕೆ ಹೊಸ ದಿಕ್ಕು ನೀಡುವ ಐತಿಹಾಸಿಕ ಕ್ರಮವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಬೆಂಗಳೂರಿನ ಪುಟ್ಟಣ್ಣ ಚೆಟ್ಟಿ ಪುರಭವನದಲ್ಲಿ ಇಂದು ಆಯೋಜಿಸಲಾಗಿದ್ದ “ಟೌನ್ ಹಾಲ್ ಆಫ್ ವುಮನ್” ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಮಹಿಳೆಯರಿಗೆ ರಾಜಕೀಯ ಕ್ಷೇತ್ರದಲ್ಲಿ ಸಮಾನ ಅವಕಾಶಗಳನ್ನು ಒದಗಿಸುವಲ್ಲಿ ಈ ಅಧಿನಿಯಮ ಪ್ರಮುಖ ಪಾತ್ರ ವಹಿಸಲಿದೆ. ಸಮಾಜದ ವಿವಿಧ ವಲಯಗಳಲ್ಲಿ ಮಹಿಳೆಯರ ಪಾತ್ರವನ್ನು ಬಲಪಡಿಸುವ ಉದ್ದೇಶದಿಂದ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ಮಹಿಳಾ ಸಬಲೀಕರಣ, ನಾಯಕತ್ವ ಅಭಿವೃದ್ಧಿ ಮತ್ತು ಸಾಮಾಜಿಕ ಭಾಗವಹಿಸುವಿಕೆ ಕುರಿತಾಗಿ ವಿಚಾರ ವಿನಿಮಯ ನಡೆಯಿತು.
ಕಾರ್ಯಕ್ರಮದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಪದ್ಮಶ್ರೀ ಡಾ. ವಿಜಯಲಕ್ಷ್ಮಿ ದೇಶಮಾನೆ, ಪದ್ಮಶ್ರೀ ಡಾ. ಸುಶೀಲಮ್ಮ, ಪಕ್ಷದ ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಮಂಜುಳಾ ಹಾಗೂ ರಾಜ್ಯ ಉಪಾಧ್ಯಕ್ಷೆ ಮಾಳವಿಕಾ ಅವಿನಾಶ್ ಸೇರಿದಂತೆ ವಿವಿಧ ಕ್ಷೇತ್ರಗಳ ಮಹಿಳಾ ಸಾಧಕಿಯರು ಭಾಗವಹಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa