ನಾರಿ ಶಕ್ತಿ ವಂದನ ಸಮ್ಮೇಳನ ; ನೇರಪ್ರಸಾರ ವೀಕ್ಷಿಸಿದ ವಿಜಯೇಂದ್ರ
ಬೆಂಗಳೂರು, 13 ಏಪ್ರಿಲ್ (ಹಿ.ಸ.) : ಆ್ಯಂಕರ್ : ನವದೆಹಲಿಯಲ್ಲಿ ನಡೆದ ನಾರಿ ಶಕ್ತಿ ವಂದನ ಸಮ್ಮೇಳನದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಭಾಷಣವನ್ನು ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ನೇರ ಪ್ರಸಾರದ ಮೂಲಕ ಆಲಿಸಲಾಯಿತು. ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಉಪಸ್ಥಿತರಿದ್ದು, ಮ
Byv


ಬೆಂಗಳೂರು, 13 ಏಪ್ರಿಲ್ (ಹಿ.ಸ.) :

ಆ್ಯಂಕರ್ : ನವದೆಹಲಿಯಲ್ಲಿ ನಡೆದ ನಾರಿ ಶಕ್ತಿ ವಂದನ ಸಮ್ಮೇಳನದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಭಾಷಣವನ್ನು ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ನೇರ ಪ್ರಸಾರದ ಮೂಲಕ ಆಲಿಸಲಾಯಿತು. ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಉಪಸ್ಥಿತರಿದ್ದು, ಮಹಿಳಾ ಸಬಲೀಕರಣದ ಮಹತ್ವವನ್ನು ಒತ್ತಿ ಹೇಳಿದರು.

ಸಶಕ್ತ ರಾಷ್ಟ್ರ ನಿರ್ಮಾಣದಲ್ಲಿ ನಾರಿಶಕ್ತಿಯ ಪಾತ್ರ ಅನನ್ಯ ಮತ್ತು ಅಪ್ರತಿಮವಾಗಿದ್ದು, ದೇಶದ ಅಭಿವೃದ್ಧಿಗೆ ಮಹಿಳೆಯರ ಸಕ್ರಿಯ ಭಾಗವಹಿಸುವಿಕೆ ಅವಶ್ಯಕವೆಂದು ಅವರು ಅಭಿಪ್ರಾಯಪಟ್ಟರು. ಹಲವು ದಶಕಗಳಿಂದ ಚರ್ಚೆಯಾಗುತ್ತಿದ್ದ ಮಹಿಳಾ ಮೀಸಲಾತಿಯ ಕನಸು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದೃಢ ಸಂಕಲ್ಪ ಮತ್ತು ರಾಜಕೀಯ ಇಚ್ಛಾಶಕ್ತಿಯಿಂದ ಸಾಕಾರಗೊಂಡಿದೆ ಎಂದು ಹೇಳಿದರು.

ನಾರಿ ಶಕ್ತಿ ವಂದನ ಅಧಿನಿಯಮ ಜಾರಿಯಾದ ಬಳಿಕ ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ದೊರೆಯಲಿದ್ದು, ಇದು ಮಹಿಳೆಯರಿಗೆ ನಿರ್ಧಾರಾತ್ಮಕ ಹಂತಗಳಲ್ಲಿ ಹೆಚ್ಚಿನ ಅವಕಾಶಗಳನ್ನು ಒದಗಿಸುತ್ತದೆ. ಮಹಿಳೆಯರ ಧ್ವನಿ ಬಲವಾದಾಗ ಮಾತ್ರ ಸಮಗ್ರ ಅಭಿವೃದ್ಧಿ ಸಾಧ್ಯ ಎಂದು ಅವರು ತಿಳಿಸಿದರು.

ವಿಕಸಿತ ಭಾರತದ ನಿರ್ಮಾಣದಲ್ಲಿ ಮಹಿಳಾ ಸಬಲೀಕರಣ ಪ್ರಮುಖ ಪಾತ್ರ ವಹಿಸುವುದರಿಂದ, ಈ ಐತಿಹಾಸಿಕ ಕ್ರಮವು ದೇಶದ ರಾಜಕೀಯ ಹಾಗೂ ಸಾಮಾಜಿಕ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆ ತರಲಿದೆ. ಈ ಸಂದರ್ಭವನ್ನು ಇತಿಹಾಸದ ಮಹತ್ವದ ಘಟ್ಟವೆಂದು ಪರಿಗಣಿಸಲಾಗುತ್ತಿದೆ.

ಕಾರ್ಯಕ್ರಮದಲ್ಲಿ ಸಂಸದ ಗೋವಿಂದ ಕಾರಜೋಳ , ಪಿ. ರಾಜೀವ್, ನಂದೀಶ್ ರೆಡ್ಡಿ, ಪ್ರೀತಮ್ ಗೌಡ, ಮಾಳವಿಕಾ ಅವಿನಾಶ ಸೇರಿದಂತೆ ಹಲವು ನಾಯಕರು, ಮಹಿಳಾ ಮೋರ್ಚಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande