ರಾಜ್ಯದ ಹಲವೆಡೆ ಗುಡುಗು-ಮಳೆ ಮುನ್ಸೂಚನೆ
ಬೆಂಗಳೂರು, 13 ಏಪ್ರಿಲ್ (ಹಿ.ಸ.) : ಆ್ಯಂಕರ್ : ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯ ಪ್ರಕಾರ, ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಒಣ ಹವಾಮಾನ ಮತ್ತು ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಮಧ್ಯಾಹ್ನ ನಂತರ ಕೆಲವು ಕಡೆ ಮೋಡ ಕವಿದ ವಾತಾವರಣ ಕಾಣಿಸಿಕೊಳ್ಳುವ ನಿರೀಕ್ಷೆಯಿದೆ. ಇಂದಿನಿಂ
ರಾಜ್ಯದ ಹಲವೆಡೆ ಗುಡುಗು-ಮಳೆ ಮುನ್ಸೂಚನೆ


ಬೆಂಗಳೂರು, 13 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯ ಪ್ರಕಾರ, ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಒಣ ಹವಾಮಾನ ಮತ್ತು ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಮಧ್ಯಾಹ್ನ ನಂತರ ಕೆಲವು ಕಡೆ ಮೋಡ ಕವಿದ ವಾತಾವರಣ ಕಾಣಿಸಿಕೊಳ್ಳುವ ನಿರೀಕ್ಷೆಯಿದೆ.

ಇಂದಿನಿಂದ ಏಪ್ರಿಲ್ 16ರವರೆಗೆ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಕೆಲವೆಡೆ ಗುಡುಗು-ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಏಪ್ರಿಲ್ 15 ಮತ್ತು 16ರಂದು ಮಾತ್ರ ಇಂತಹ ಮಳೆಯ ಚಟುವಟಿಕೆಗಳು ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

ಇದರ ಹೊರತಾಗಿ ಉಳಿದ ದಿನಗಳಲ್ಲಿ ರಾಜ್ಯದ ಬಹುತೇಕ ಭಾಗಗಳಲ್ಲಿ ಒಣ ಹವಾಮಾನ ಮುಂದುವರಿಯಲಿದ್ದು, ಬಿಸಿಲಿನ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande