
ಕೊಪ್ಪಳ, 13 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ನೇರ ಸಂದರ್ಶನವನ್ನು ಏಪ್ರಿಲ್ 18 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ರ ವರೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಆಯೋಜಿಸಲಾಗಿದೆ.
ಪಿಯುಸಿ ಮತ್ತು ಯಾವುದೇ ಪದವಿ ಪಾಸ್ ಅಥವಾ ಫೇಲ್ ವಿದ್ಯಾಭ್ಯಾಸ ಹೊಂದಿರುವ ಅಭ್ಯರ್ಥಿಗಳು
ಭಾಗವಹಿಸಬಹುದಾಗಿದೆ.
ಆಸಕ್ತ 18 ರಿಂದ 30 ವರ್ಷ ನಿರುದ್ಯೋಗಿ ಯುವಕ ಮತ್ತು ಯುವತಿಯರು ದೃಢೀಕರಿಸಲಾದ ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳ 2 ಪ್ರತಿಗಳೊಂದಿಗೆ ಮತ್ತು ಆಧಾರ ಕಾರ್ಡಿನ ಪ್ರತಿ, ಬಯೋಡಾಟಾ(ರೆಸ್ಯೂಮ್) ಹಾಗೂ ಪಾಸ್ ಪೋರ್ಟ್ ಅಳತೆಯ 2 ಭಾವಚಿತ್ರಗಳೊಂದಿಗೆ ಭಾಗವಹಿಸಿ, ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸುವಂತೆ ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್