ರಕ್ತದಾನ ಶಿಬಿರಕ್ಕೆ ಸಚಿವ ಖಂಡ್ರೆ ಚಾಲನೆ
ಬೀದರ್, 13 ಏಪ್ರಿಲ್ (ಹಿ.ಸ.) : ಆ್ಯಂಕರ್ : ಭಾರತ ರತ್ನ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಭಾಲ್ಕಿ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ವಿಲಾಸ ಮೊರೆ ಅವರ ನೇತೃತ್ವದಲ್ಲಿ ಆಯೋಜಿಸಲಾದ “ರಕ್ತದಾನ ಶಿಬಿರ” ಕ್ಕೆ ಸಚಿವ ಈಶ್ವರ ಖಂಡ್ರೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಮಾಜದ ಒಳಿತಿಗಾ
Camp


ಬೀದರ್, 13 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಭಾರತ ರತ್ನ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಭಾಲ್ಕಿ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ವಿಲಾಸ ಮೊರೆ ಅವರ ನೇತೃತ್ವದಲ್ಲಿ ಆಯೋಜಿಸಲಾದ “ರಕ್ತದಾನ ಶಿಬಿರ” ಕ್ಕೆ ಸಚಿವ ಈಶ್ವರ ಖಂಡ್ರೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಸಮಾಜದ ಒಳಿತಿಗಾಗಿ ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಿದ ಎಲ್ಲಾ ದಾನಿಗಳ ಸೇವಾಭಾವವನ್ನು ಹೃತ್ಪೂರ್ವಕವಾಗಿ ಅಭಿನಂದಿಸಿದ ಸಚಿವರು, ಇಂತಹ ಮಾನವೀಯ ಕಾರ್ಯಗಳು ಡಾ. ಅಂಬೇಡ್ಕರ್ ಅವರು ಸಾರಿದ ಸಮಾನತೆ, ಸಹಾನುಭೂತಿ ಹಾಗೂ ಸಾಮಾಜಿಕ ಜವಾಬ್ದಾರಿಯ ಮೌಲ್ಯಗಳನ್ನು ಪ್ರತಿಬಿಂಬಿಸುತ್ತವೆ ಎಂದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande