ಮಹಿಳಾ ದ್ವಿಚಕ್ರ ವಾಹನ ರ್ಯಾಲಿಗೆ ಶಾಸಕ ಟೆಂಗಿನಕಾಯಿ ಚಾಲನೆ
ರ್ಯಾಲಿ
Bike rally


ಹುಬ್ಬಳ್ಳಿ, 13 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಮಹಿಳೆಯರಿಗೆ ಲೋಕಸಭೆ ಮತ್ತು ವಿಧಾನ ಸಭೆಗಳಲ್ಲಿ 33% ಮೀಸಲಾತಿ ಕಲ್ಪಿಸುವ ನಾರಿ ಶಕ್ತಿ ವಂದನಾ ಅಧಿನಿಯಮವನ್ನು ಬೆಂಬಲಿಸಿ ಬಿಜೆಪಿ ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲೆಯ ವತಿಯಿಂದ ಜರುಗಿದ ಬೈಕ್ ರ‍್ಯಾಲಿ ಗೆ ಶಾಸಕ ಮಹೇಶ ಟೆಂಗಿನಕಾಯಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯಾನಂತರದ ಸುದೀರ್ಘ ಇತಿಹಾಸದಲ್ಲಿ ಮಹಿಳಾ ಮೀಸಲಾತಿಯ ಕನಸು ನನಸಾಗದೆ ಉಳಿದಿತ್ತು. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ಮಹಿಳಾ ಸಶಕ್ತೀಕರಣಕ್ಕೆ ಹೊಸ ಆಯಾಮ ನೀಡಿದ್ದಾರೆ. ಹೆಣ್ಣುಮಕ್ಕಳ ರಕ್ಷಣೆ ಮತ್ತು ಶಿಕ್ಷಣಕ್ಕಾಗಿ ತಂದ 'ಬೇಟಿ ಬಚಾವೋ ಬೇಟಿ ಪಢಾವೋ' ಯೋಜನೆಯಿಂದ ಹಿಡಿದು, ಶಾಸನಸಭೆಗಳಲ್ಲಿ ಮಹಿಳೆಯರಿಗೆ ಅಧಿಕಾರ ನೀಡುವ 'ನಾರಿ ಶಕ್ತಿ ವಂದನಾ ಅಧಿನಿಯಮ'ದವರೆಗೆ ಅವರು ಕೈಗೊಂಡಿರುವ ಐತಿಹಾಸಿಕ ಕ್ರಮಗಳು ಅಭಿನಂದನಾರ್ಹ ಎಂದರು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಶ್ರೀಮತಿ ಸೀಮಾ ಮಸೂತಿ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷರಾದ ಶ್ರೀಮತಿ ಸೀಮಾ ಲಡ್ವಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶಿವು ಮೆಣಸಿನಕಾಯಿ ಹಾಗೂ ಪ್ರಮುಖರಾದ ಮಂಜುನಾಥ್ ಕಾಟಕರ, ಪ್ರಭು ನವಲಗುಂದ್ ಮಠ್, ರಾಮನ ಗೌಡ ಶೆಟ್ಟನ ಗೌಡರ್ ಹಾಗೂ ಇತರ ಪ್ರಮುಖರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande