ಅಂಬೇಡ್ಕರ್ ಜಯಂತಿ ಪ್ರಶಸ್ತಿ ಪ್ರದಾನ
ಬೆಂಗಳೂರು, 14 ಏಪ್ರಿಲ್ (ಹಿ.ಸ.) : ಆ್ಯಂಕರ್ : ಸಂವಿಧಾನಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ 135ನೇ ವರ್ಷದ ಜನ್ಮದಿನಾಚರಣೆ ಅಂಗವಾಗಿ ಸಮಾಜ ಕಲ್ಯಾಣ ಇಲಾಖೆ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಆಯೋಜಿಸಿದ್ದ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿ, ಅಂಬೇಡ್ಕರ್ ಪ್ರಶಸ್
Ambedkar Jayanti


ಬೆಂಗಳೂರು, 14 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಸಂವಿಧಾನಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ 135ನೇ ವರ್ಷದ ಜನ್ಮದಿನಾಚರಣೆ ಅಂಗವಾಗಿ ಸಮಾಜ ಕಲ್ಯಾಣ ಇಲಾಖೆ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಆಯೋಜಿಸಿದ್ದ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿ, ಅಂಬೇಡ್ಕರ್ ಪ್ರಶಸ್ತಿ ವಿತರಿಸಿದರು.

ಕಾರ್ಯಕ್ರಮದಲ್ಲಿ ಶಾಸಕ ರಿಜ್ವಾನ್ ಅರ್ಷದ್ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಸಚಿವರಾದ ಹೆಚ್.ಸಿ.ಮಹದೇವಪ್ಪ, ಕೆ.ಹೆಚ್.ಮುನಿಯಪ್ಪ, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್, ಮಾಜಿ ಸಚಿವ ಹೆಚ್. ಆಂಜನೇಯ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande