
ಬೆಂಗಳೂರು, 14 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಸಂವಿಧಾನ ಶಿಲ್ಪಿ, ಭಾರತ ರತ್ನ ಅಂಬೇಡ್ಕರ್ ಅವರ ಜಯಂತಿಯ ಅಂಗವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ನಮನ ಸಲ್ಲಿಸಿ, ರಾಜ್ಯದ ಸಮಸ್ತ ಜನತೆಗೆ ಹಾರ್ದಿಕ ಶುಭಾಶಯಗಳನ್ನು ಕೋರಿದ್ದಾರೆ.
“ಸಮಾನತೆಯ ಹರಿಕಾರ”ರಾದ ಡಾ. ಅಂಬೇಡ್ಕರ್ ಅವರ ಚಿಂತನೆಗಳು ಭಾರತೀಯರ ಆತ್ಮಗೌರವವನ್ನು ಬಡಿದೆಬ್ಬಿಸಿದ್ದು, ಪ್ರತಿಯೊಬ್ಬ ನಾಗರಿಕನಿಗೂ ಶಕ್ತಿ ನೀಡುವ ಶಾಶ್ವತ ಪ್ರೇರಣೆಯಾಗಿದೆ ಎಂದು ಅವರು ತಿಳಿಸಿದ್ದಾರೆ.
ಭಾರತೀಯ ಸಂವಿಧಾನದ ಮೂಲಕ ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ಬಲವಾದ ಅಡಿಪಾಯವನ್ನು ನಿರ್ಮಿಸಿದ ಮಹಾನ್ ದಾರ್ಶನಿಕರಾಗಿ ಡಾ. ಅಂಬೇಡ್ಕರ್ ಅವರ ಪಾತ್ರವನ್ನು ವಿಜಯೇಂದ್ರ ಸ್ಮರಿಸಿದ್ದಾರೆ. ಅವರ ಆದರ್ಶಗಳು ದೇಶಕ್ಕೆ ಮಾತ್ರವಲ್ಲ, ಇಡೀ ವಿಶ್ವಕ್ಕೂ ಮಾದರಿಯಾಗಿದೆ ಎಂದು ಹೇಳಿದ್ದಾರೆ.
ಡಾ. ಅಂಬೇಡ್ಕರ್ ಅವರ ಜೀವನ ಸಂದೇಶವನ್ನು ಅಳವಡಿಸಿಕೊಂಡು, ಸಮಾನತೆ ಮತ್ತು ಸೌಹಾರ್ದತೆಯ ಸಮಾಜ ನಿರ್ಮಾಣದತ್ತ ನಾವು ಎಲ್ಲರೂ ಕೈಜೋಡಿಸೋಣ ಎಂದು ವಿಜಯೇಂದ್ರ ಕರೆ ನೀಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa