
ಗಾಂಧಿನಗರ, 14 ಏಪ್ರಿಲ್ (ಹಿ.ಸ.) :
ಆ್ಯಂಕರ್ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂವಿಧಾನ ಶಿಲ್ಪಿ ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಗೌರವ ನಮನ ಸಲ್ಲಿಸಿದರು.
ಗುಜರಾತ್ನ ಗಾಂಧಿನಗರದಲ್ಲಿರುವ ಲೋಕಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ ರಾಷ್ಟ್ರಪತಿಗಳು, ಅಂಬೇಡ್ಕರ್ ಅವರ ಭಾವ ಚಿತ್ರಕ್ಕೆ ಪುಷ್ಪನಮನ ಅರ್ಪಿಸಿದರು.
ಪ್ರತಿ ವರ್ಷ ಏಪ್ರಿಲ್ 14ರಂದು ಆಚರಿಸಲಾಗುವ ಅಂಬೇಡ್ಕರ್ ಜಯಂತಿ ಅಂಗವಾಗಿ ದೇಶದಾದ್ಯಂತ ವಿಶೇಷ ಕಾರ್ಯಕ್ರಮಗಳು ನಡೆಯುತ್ತಿವೆ. ಈ ಸಂದರ್ಭದಲ್ಲಿ ಅಂಬೇಡ್ಕರ್ ಅವರು ಪ್ರತಿಪಾದಿಸಿದ ಸಮಾನತೆ, ಸಾಮಾಜಿಕ ನ್ಯಾಯ ಹಾಗೂ ಸಂವಿಧಾನಿಕ ಮೌಲ್ಯಗಳನ್ನು ರಾಷ್ಟ್ರಪತಿಗಳು ಸ್ಮರಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa