
ಶಿವಮೊಗ್ಗ, 14 ಏಪ್ರಿಲ್ (ಹಿ.ಸ.):
ಆ್ಯಂಕರ್ : ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ವತಿಯಿಂದ ನಿಧಿ ಆಪ್ಕೆ ನಿಕಟ್ 2.0 ಕಾರ್ಯಕ್ರಮವನ್ನು ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಏ. 27 ರಂದು ಆಯೋಜಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಸಾಗರ ತಾಲೂಕು ಜೋಗ್ ರಸ್ತೆ ಮಲ್ನಾಡ್ ಡೆವಲಪ್ಮೆಂಟ್ ಫೌಂಡೇಷನ್, ತಾರಾಪುರ ಕ್ಯಾಂಪಸ್ ಹಾಗೂ ದಾವಣಗೆರೆ ಜಿಲ್ಲೆಯಲ್ಲಿ ಹರಿಹರದ ಪಿ.ಬಿ.ರಸ್ತೆಯ ಮರಿಯಾ ನಿವಾಸ ಶಾಲೆಯಲ್ಲಿ ದಾವಣಗೆರೆ ಇಲ್ಲಿ ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ ನಡೆಯಲಿದೆ.
ಉದ್ಯೋಗದಾತರು ಮತ್ತು ಉದ್ಯೋಗಿಗಳಿಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆ ಹಾಗೂ ಪಿಂಚಣಿದಾರರಿಗೆ ಮಧ್ಯಾಹ್ನ 2.30 ರಿಂದ ಸಂಜೆ 4 ಗಂಟೆವರೆಗೆ ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ ನಡೆಯಲಿದ್ದು, ಉದ್ಯೋಗದಾತರು ಮತ್ತು ಉದ್ಯೋಗಿಗಳು ಮತ್ತು ಪಿಂಚಣಿದಾರರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಪ್ರಾದೇಶಿಕ ಕಚೇರಿಯ ಸಹಾಯಕ ಭವಿಷ್ಯ ನಿಧಿ ಆಯುಕ್ತರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa