ಶಾಸಕರ ಮೇಲೆ ಹಿಡಿತ ಕಳೆದುಕೊಂಡ ಮುಖ್ಯಮಂತ್ರಿ : ಬೊಮ್ಮಾಯಿ ಟೀಕೆ
ಬೆಂಗಳೂರು, 14 ಏಪ್ರಿಲ್ (ಹಿ.ಸ.) : ಆ್ಯಂಕರ್ : ಕಾಂಗ್ರೆಸ್ ಶಾಸಕರ ದೆಹಲಿ ಪೆರೇಡ್ ವಿಚಾರವಾಗಿ ಸಂಸದ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ವಿರುದ್ಧ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸಚಿವ ಸಂಪುಟ ಸದಸ್ಯರು ಮತ್ತು ಶಾಸಕರ ಮೇಲೆ ಹ
ಶಾಸಕರ ಮೇಲೆ ಹಿಡಿತ ಕಳೆದುಕೊಂಡ ಮುಖ್ಯಮಂತ್ರಿ : ಬೊಮ್ಮಾಯಿ ಟೀಕೆ


ಬೆಂಗಳೂರು, 14 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಕಾಂಗ್ರೆಸ್ ಶಾಸಕರ ದೆಹಲಿ ಪೆರೇಡ್ ವಿಚಾರವಾಗಿ ಸಂಸದ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ವಿರುದ್ಧ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸಚಿವ ಸಂಪುಟ ಸದಸ್ಯರು ಮತ್ತು ಶಾಸಕರ ಮೇಲೆ ಹಿಡಿತ ಕಳೆದುಕೊಂಡಿದ್ದಾರೆ ಎಂದು ಆರೋಪಿಸಿದರು. ದೀರ್ಘಕಾಲ ಆಡಳಿತ ನಡೆಸಿದ ಮುಖ್ಯಮಂತ್ರಿ ಅವರ ನಾಯಕತ್ವವನ್ನು ಶಾಸಕರು ಮೀರಿ ನಡೆದುಕೊಳ್ಳುತ್ತಿರುವುದು ಸ್ಪಷ್ಟವಾಗುತ್ತಿದೆ ಎಂದರು.

ಶಾಸಕರು ತಮ್ಮ ನಾಯಕತ್ವದ ವಿರುದ್ಧವೇ ಹೊರಟಿರುವುದು, ಮುಖ್ಯಮಂತ್ರಿ ಅವರ ಮೇಲೆ ವಿಶ್ವಾಸ ಕುಸಿದಿರುವುದನ್ನು ಸೂಚಿಸುತ್ತದೆ ಎಂದು ಹೇಳಿದ ಬೊಮ್ಮಾಯಿ, ಇದರ ಹಿಂದೆ ಮುಖ್ಯಮಂತ್ರಿಗಳೇ ಇದ್ದಾರೆ ಎನ್ನುವ ಅಭಿಪ್ರಾಯವೂ ವ್ಯಕ್ತವಾಗುತ್ತಿದೆ ಎಂದು ತಿಳಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande