ಕನಿಷ್ಠ ವೇತನ ಜಾರಿಗೆ ಒತ್ತಾಯ, ಹುಬ್ಬಳ್ಳಿಯಲ್ಲಿ ಸಹಿ ಸಂಗ್ರಹ ಚಳುವಳಿಗೆ ಚಾಲನೆ
ಹುಬ್ಬಳ್ಳಿ, 14 ಏಪ್ರಿಲ್ (ಹಿ.ಸ.) : ಆ್ಯಂಕರ್ : ವೈಜ್ಞಾನಿಕ ಕನಿಷ್ಠ ವೇತನ ಜಾರಿ ಹಾಗೂ ಕಾರ್ಮಿಕ ಹಕ್ಕುಗಳ ರಕ್ಷಣೆಗೆ ಒತ್ತಾಯಿಸಿ ಸಿಐಟಿಯು ವತಿಯಿಂದ ಹುಬ್ಬಳ್ಳಿಯಲ್ಲಿ ಸಹಿ ಸಂಗ್ರಹ ಚಳುವಳಿಗೆ ಚಾಲನೆ ನೀಡಲಾಯಿತು. ಡಾ. ಬಾಬಾಸಾಹೇಬರ ಜಯಂತಿ ಅಂಗವಾಗಿ ನಗರದ ಎಪಿಎಂಸಿ ಆವರಣದಲ್ಲಿರುವ ಅಂಬೇಡ್ಕರ್ ಅವರ
ಅಭಿಯಾನ


ಹುಬ್ಬಳ್ಳಿ, 14 ಏಪ್ರಿಲ್ (ಹಿ.ಸ.) :

ಆ್ಯಂಕರ್ : ವೈಜ್ಞಾನಿಕ ಕನಿಷ್ಠ ವೇತನ ಜಾರಿ ಹಾಗೂ ಕಾರ್ಮಿಕ ಹಕ್ಕುಗಳ ರಕ್ಷಣೆಗೆ ಒತ್ತಾಯಿಸಿ ಸಿಐಟಿಯು ವತಿಯಿಂದ ಹುಬ್ಬಳ್ಳಿಯಲ್ಲಿ ಸಹಿ ಸಂಗ್ರಹ ಚಳುವಳಿಗೆ ಚಾಲನೆ ನೀಡಲಾಯಿತು.

ಡಾ. ಬಾಬಾಸಾಹೇಬರ ಜಯಂತಿ ಅಂಗವಾಗಿ ನಗರದ ಎಪಿಎಂಸಿ ಆವರಣದಲ್ಲಿರುವ ಅಂಬೇಡ್ಕರ್ ಅವರ ಪುತ್ಥಳಿಗೆ ಗೌರವಾರ್ಪಣೆ ಸಲ್ಲಿಸಿ, ಇಂದಿನಿಂದ ಮೇ 30ರವರೆಗೆ ನಡೆಯಲಿರುವ ಚಳುವಳಿಯನ್ನು ಪ್ರಾರಂಭಿಸಲಾಯಿತು.

ಈ ಚಳುವಳಿಯ ಮೂಲಕ ಕಾರ್ಮಿಕರಿಗೆ ನ್ಯಾಯಸಮ್ಮತ ಕನಿಷ್ಠ ವೇತನ ಜಾರಿ, ಕಾರ್ಮಿಕ ಹಕ್ಕುಗಳ ರಕ್ಷಣೆ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿರಿಸಲಾಗಿದೆ.

ಕಾರ್ಯಕ್ರಮದಲ್ಲಿ ಮುಖಂಡರಾದ ಮಹೇಶ್ ಪತ್ತಾರ, ಗುರುಸಿದ್ದಪ್ಪ ಅಂಬಿಗೇರ, ಬಸವಣ್ಣೆಪ್ಪ ನೀರಲಗಿ, ಮಂಜುನಾಥ ಹುಜರಾತಿ, ಹನಮಂತ ಅಂಬಿಗೇರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande