ಅತಿಯಾದ ಓಲೈಕೆಯೇ ಕಾಂಗ್ರೆಸ್ ಗೆ ಮುಳುವಾಗಲಿದೆ : ಆರ್. ಅಶೋಕ್
ಬೆಂಗಳೂರು, 14 ಏಪ್ರಿಲ್ (ಹಿ.ಸ.) : ಆ್ಯಂಕರ್ : ಕಾಂಗ್ರೆಸ್ ಪಕ್ಷದ ಒಳರಾಜಕೀಯ ಬೆಳವಣಿಗೆಗಳ ಕುರಿತು ಪ್ರತಿ ಪಕ್ಷದ ನಾಯಕ ಆರ್.ಅಶೋಕ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಅವರ ಬೆಂಬಲಿಗರು ವಿಧಾನಸೌಧದಲ್ಲಿ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದ ಪ್ರಕರ
ಅತಿಯಾದ ಓಲೈಕೆಯೇ ಕಾಂಗ್ರೆಸ್ ಗೆ ಮುಳುವಾಗಲಿದೆ : ಆರ್. ಅಶೋಕ್


ಬೆಂಗಳೂರು, 14 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಕಾಂಗ್ರೆಸ್ ಪಕ್ಷದ ಒಳರಾಜಕೀಯ ಬೆಳವಣಿಗೆಗಳ ಕುರಿತು ಪ್ರತಿ ಪಕ್ಷದ ನಾಯಕ ಆರ್.ಅಶೋಕ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಅವರ ಬೆಂಬಲಿಗರು ವಿಧಾನಸೌಧದಲ್ಲಿ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದ ಪ್ರಕರಣವನ್ನು ಉಲ್ಲೇಖಿಸಿದ ಅಶೋಕ್, ಫೆಬ್ರವರಿ 2024ರಲ್ಲಿ ಸದನದಲ್ಲೇ ಅತಿಯಾದ ಮುಸ್ಲಿಂ ಓಲೈಕೆ, ತುಷ್ಟೀಕರಣವೇ ಕಾಂಗ್ರೆಸ್ ಪಕ್ಷಕ್ಕೆ ಮುಂದೊಂದು ದಿನ ಮುಳುವಾಗುತ್ತದೆ ಎಂದು ಎಚ್ಚರಿಸಿದ್ದೆ ಎಂದು ಹೇಳಿದರು.

ದಾವಣಗೆರೆ ದಕ್ಷಿಣ ಉಪಚುನಾವಣೆ ಸುತ್ತ ನಡೆಯುತ್ತಿರುವ ಬೆಳವಣಿಗೆಗಳನ್ನು ಗಮನಿಸಿದರೆ, ತಾವು ಹೇಳಿದ್ದೇ ಈಗ ನಿಜವಾಗುತ್ತಿರುವಂತೆ ಕಾಣುತ್ತಿದೆ ಎಂದು ಅವರು ಅಭಿಪ್ರಾಯಪಟ್ಟರು.

“ಪರ್ಯಾಯ ಆಯ್ಕೆ ಇರುವವರೆಗೆ ಮಾತ್ರ ಮುಸ್ಲಿಮರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುತ್ತಾರೆ ಎಂಬ ವಾಸ್ತವವನ್ನು ಕಾಂಗ್ರೆಸ್ ಈಗಲಾದರೂ ಅರ್ಥ ಮಾಡಿಕೊಳ್ಳಬೇಕು” ಎಂದು ಕಟುವಾಗಿ ಟೀಕಿಸಿದರು.

ಕರ್ನಾಟಕದ ಕಾಂಗ್ರೆಸ್ ನಾಯಕರು ಓಲೈಕೆ ಮತ್ತು ತುಷ್ಟೀಕರಣದ ರಾಜಕಾರಣವನ್ನು ಬಿಟ್ಟು ಅಭಿವೃದ್ಧಿಯತ್ತ ಗಮನ ಹರಿಸಬೇಕೆಂದು ಸಲಹೆ ನೀಡಿದ ಅಶೋಕ್, ಇಲ್ಲವಾದರೆ ಜಮ್ಮು-ಕಾಶ್ಮೀರ, ಹರಿಯಾಣ, ಬಿಹಾರ ರಾಜ್ಯಗಳಲ್ಲಿ ಕಾಂಗ್ರೆಸ್ಗೆ ಎದುರಾದ ಪರಿಸ್ಥಿತಿಯೇ ಕರ್ನಾಟಕದಲ್ಲಿಯೂ ಎದುರಾಗಲಿದೆ ಎಂದು ಎಚ್ಚರಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande