ಅಂಬೇಡ್ಕರ್ ಜಯಂತಿ ಅಂಗವಾಗಿ ಅನ್ನ ಸಂತರ್ಪಣೆ
ಕಲಬುರಗಿ, 14 ಏಪ್ರಿಲ್ (ಹಿ.ಸ.) : ಆ್ಯಂಕರ್ : ಬಾಬಾ ಸಾಹೇಬ ಅಂಬೇಡ್ಕರ್ 135ನೇ ಜಯಂತ್ಯೋತ್ಸವದ ಅಂಗವಾಗಿ ಕಲಬುರಗಿ ನಗರದಲ್ಲಿ ಭಕ್ತಿಪೂರ್ವಕವಾಗಿ ಆಚರಣೆ ನಡೆಯಿತು. ನಗರದ ಜಗತ್ ವೃತ್ತದ ಬಳಿ ಇರುವ ಅಂಬೇಡ್ಕರ್ ಅವರ ಮೂರ್ತಿಗೆ ಸಚಿವ ಶರಣಪ್ರಕಾಶ ಪಾಟೀಲ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಇದೇ ಸಂದ
ಅನ್ನಸಂತರ್ಪಣೆ


ಕಲಬುರಗಿ, 14 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಬಾಬಾ ಸಾಹೇಬ ಅಂಬೇಡ್ಕರ್ 135ನೇ ಜಯಂತ್ಯೋತ್ಸವದ ಅಂಗವಾಗಿ ಕಲಬುರಗಿ ನಗರದಲ್ಲಿ ಭಕ್ತಿಪೂರ್ವಕವಾಗಿ ಆಚರಣೆ ನಡೆಯಿತು.

ನಗರದ ಜಗತ್ ವೃತ್ತದ ಬಳಿ ಇರುವ ಅಂಬೇಡ್ಕರ್ ಅವರ ಮೂರ್ತಿಗೆ ಸಚಿವ ಶರಣಪ್ರಕಾಶ ಪಾಟೀಲ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

ಇದೇ ಸಂದರ್ಭದಲ್ಲಿ ಬೋಧಿವೃಕ್ಷ ಗೆಳೆಯರ ಬಳಗ ವತಿಯಿಂದ ಆಯೋಜಿಸಲಾದ ಅನ್ನ ಸಂತರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಚಿವರು, ಸಾರ್ವಜನಿಕರಿಗೆ ಅನ್ನ ವಿತರಣೆ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಜಗದೇವ್ ಗುತ್ತೇದಾರ್ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು ಹಾಗೂ ಡಾ. ಅಂಬೇಡ್ಕರ್ ಅಭಿಮಾನಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande