ಭಾರತೀಯ ಸೇನೆ ಸೇರ್ಪಡೆಗೆ ಉಚಿತ ತರಬೇತಿ : ಅರ್ಜಿ ಆಹ್ವಾನ
ಉಡುಪಿ, 14 ಏಪ್ರಿಲ್ (ಹಿ.ಸ.) : ಆ್ಯಂಕರ್ : ಭಾರತೀಯ ಸೇನೆ ಹಾಗೂ ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ್ಪಡೆಯಾಗಲು ಬಯಸುವ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಉಚಿತ ವೃತ್ತಿ ಮಾರ್ಗದರ್ಶನ ಮತ್ತು ತರಬೇತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2026–27ನೇ ಸ
ಭಾರತೀಯ ಸೇನೆ ಸೇರ್ಪಡೆಗೆ ಉಚಿತ ತರಬೇತಿ : ಅರ್ಜಿ ಆಹ್ವಾನ


ಉಡುಪಿ, 14 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಭಾರತೀಯ ಸೇನೆ ಹಾಗೂ ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ್ಪಡೆಯಾಗಲು ಬಯಸುವ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಉಚಿತ ವೃತ್ತಿ ಮಾರ್ಗದರ್ಶನ ಮತ್ತು ತರಬೇತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2026–27ನೇ ಸಾಲಿಗೆ (ಬಾಲಕರಿಗೆ ಮಾತ್ರ) ಆಯ್ಕೆ ಪೂರ್ವ ಸಿದ್ಧತಾ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಪ್ರವರ್ಗ-1, 2(ಎ), 3(ಎ) ಮತ್ತು 3(ಬಿ) ವರ್ಗಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಜಿಲ್ಲಾ ಅಥವಾ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪಡೆದುಕೊಳ್ಳಬಹುದು ಅಥವಾ ಉಡುಪಿ ಜಿಲ್ಲಾ ವೆಬ್ಸೈಟ್ನಿಂದ ಡೌನ್ಲೋಡ್ ಮಾಡಬಹುದು. ಭರ್ತಿ ಮಾಡಿದ ಅರ್ಜಿಯನ್ನು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಖುದ್ದಾಗಿ ಅಥವಾ ನೊಂದಾಯಿತ ಅಂಚೆಯ ಮೂಲಕ ಏಪ್ರಿಲ್ 27ರೊಳಗಾಗಿ ಸಲ್ಲಿಸಬೇಕು.

ಅರ್ಹ ಅಭ್ಯರ್ಥಿಗಳನ್ನು ಮೇ 2ರಂದು ಉಡುಪಿ ಜಿಲ್ಲೆಯ ಅಜ್ಜರಕಾಡು ಮಹಾತ್ಮಗಾಂಧಿ ಮೈದಾನದಲ್ಲಿ ನಡೆಯುವ ಆಯ್ಕೆ ರ್ಯಾಲಿಯಲ್ಲಿ ಆಯ್ಕೆ ಮಾಡಲಾಗುತ್ತದೆ.

ತರಬೇತಿ ಅವಧಿ ಒಟ್ಟು 4 ತಿಂಗಳುಗಳಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ವಸತಿ, ಊಟ, ತರಬೇತಿ ವೆಚ್ಚ, ಟ್ರಾಕ್ ಸೂಟ್, ಶೂ ಹಾಗೂ ದೈಹಿಕ ತರಬೇತಿ ಸಮವಸ್ತ್ರವನ್ನು ಉಚಿತವಾಗಿ ಒದಗಿಸಲಾಗುತ್ತದೆ. ತರಬೇತಿ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹನೆಹಳ್ಳಿಯ ನ್ಯಾಷನಲ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande