
ಶಿವಮೊಗ್ಗ, 14 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಸಮಾಜ ಕಲ್ಯಾಣ ಇಲಾಖೆಯು 2026-27 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳನ್ನು ಪ್ರತಿಷ್ಠಿತ ಶಾಲೆಗಳಿಗೆ ಅರ್ಹತಾ ಪರೀಕ್ಷೆಯ ಮೂಲಕ 6ನೇ ತರಗತಿಯ 35 ಸ್ಥಾನಗಳಿಗೆ ಆನ್ಲೈನ್ ಮುಖಾಂತರ ನೊಂದಣಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಿದೆ.
ಅಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಹಾಗೂ ಎಲ್ಲಾ ತಾಲೂಕಿನ ಸಹಾಯಕ ನಿರ್ದೇಶಕರು (ಗ್ರೇಡ್ -1&2) ರವರ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಮೇ 04 ರೊಳಗಾಗಿ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಹಾಗೂ ಎಲ್ಲಾ ತಾಲೂಕಿನ ಸಹಾಯಕ ನಿರ್ದೇಶಕರು (ಗ್ರೇಡ್ -1&2) ರವರ ಕಚೇರಿಗಳನ್ನು ಹಾಗೂ ದೂ.ಸಂ.: 08182-249241 ನ್ನು ಸಂಪರ್ಕಿಸುವುದು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa