
ನವದೆಹಲಿ, 14 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಉಪ ರಾಷ್ಟ್ರಪತಿ ಭವನದಲ್ಲಿ ಸಿ. ಪಿ. ರಾಧಾಕೃಷ್ಣನ್ ಅವರನ್ನು ಭೇಟಿ ಮಾಡಿ ತಮಿಳು ಹೊಸ ವರ್ಷವಾದ ಪುತ್ತಂಡು ಹಾಗೂ ಬೈಸಾಖಿ ಹಬ್ಬದ ಪ್ರಯುಕ್ತ ಶುಭಾಶಯ ಕೋರಿದರು.
ಭೇಟಿ ಬಳಿಕ ಮಾತನಾಡಿದ ಉಪರಾಷ್ಟ್ರಪತಿ ರಾಧಾಕೃಷ್ಣನ್ ಅವರು, “ಇಂದು ಪ್ರಧಾನಿಯನ್ನು ಭೇಟಿ ಮಾಡುವುದು ಸಂತೋಷ ತಂದಿದೆ. ತಮಿಳು ಪುಥಾಂಡು ಹಾಗೂ ಬೈಸಾಖಿಯಂತಹ ಹಬ್ಬಗಳ ಸಂದರ್ಭದಲ್ಲಿ ಶುಭಾಶಯ ವಿನಿಮಯ ಮಾಡಿಕೊಂಡಿದ್ದೇವೆ. ಪುಥಾಂಡು ನಮ್ಮ ಪೂರ್ವಜರ ಜ್ಞಾನವನ್ನು ಪ್ರತಿಬಿಂಬಿಸುವುದರ ಜೊತೆಗೆ ಸಂಪ್ರದಾಯ, ಕುಟುಂಬ ಮೌಲ್ಯಗಳು ಮತ್ತು ಆಧ್ಯಾತ್ಮಿಕ ಜೀವನಶೈಲಿಯನ್ನು ಒಗ್ಗೂಡಿಸುತ್ತದೆ” ಎಂದು ಹೇಳಿದರು.
ಇದೇ ವೇಳೆ, ದೇಶದ ವಿವಿಧ ಭಾಗಗಳಲ್ಲಿ ಒಂದೇ ಸಮಯದಲ್ಲಿ ಆಚರಿಸಲಾಗುವ ಹೊಸ ವರ್ಷದ ಹಬ್ಬಗಳು ಭಾರತದ ಸಾಂಸ್ಕೃತಿಕ ವೈವಿಧ್ಯತೆಯ ಪ್ರತೀಕವಾಗಿದ್ದು, ‘ಏಕ ಭಾರತ ಶ್ರೇಷ್ಠ ಭಾರತ’ದ ಚಿಂತನೆಗೆ ಮತ್ತಷ್ಟು ಬಲ ನೀಡುತ್ತವೆ ಎಂದು ಅವರು ಅಭಿಪ್ರಾಯಪಟ್ಟರು.
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ ಪ್ರಧಾನಿ ಮೋದಿ ಅವರು, “ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರನ್ನು ಭೇಟಿ ಮಾಡಿ ಪುತ್ತಂಡುವಿನ ವಿಶೇಷ ಸಂದರ್ಭದಲ್ಲಿ ಶುಭಾಶಯ ತಿಳಿಸಿದ್ದೇನೆ. ಅವರಿಗೆ ಉತ್ತಮ ಆರೋಗ್ಯ ಮತ್ತು ಸಂತೋಷದಿಂದ ಕೂಡಿದ ವರ್ಷವಾಗಲಿ ಎಂದು ಹಾರೈಸುತ್ತೇನೆ” ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa