ಅಂಬೇಡ್ಕರ್ ಜಯಂತಿ ; ಪ್ರೇರಣಾಸ್ಥಳದಲ್ಲಿ ರಾಷ್ಟ್ರ ನಾಯಕರಿಂದ ಪುಷ್ಪ ನಮನ
ನವದೆಹಲಿ, 14 ಏಪ್ರಿಲ್ (ಹಿ.ಸ.) : ಆ್ಯಂಕರ್ : ಅಂಬೇಡ್ಕರ್ ಜಯಂತಿ ಅಂಗವಾಗಿ ಸಂಸತ್ ಸಂಕೀರ್ಣದ ಪ್ರೇರಣಾಸ್ಥಳದಲ್ಲಿ ಮಂಗಳವಾರ ರಾಷ್ಟ್ರದ ಪ್ರಮುಖ ನಾಯಕರು ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ಸಿ. ಪಿ. ರಾಧಾಕೃಷ್ಣನ್, ಪ್ರಧಾನಿ ನರ
ಅಂಬೇಡ್ಕರ್ ಜಯಂತಿ


ನವದೆಹಲಿ, 14 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಅಂಬೇಡ್ಕರ್ ಜಯಂತಿ ಅಂಗವಾಗಿ ಸಂಸತ್ ಸಂಕೀರ್ಣದ ಪ್ರೇರಣಾಸ್ಥಳದಲ್ಲಿ ಮಂಗಳವಾರ ರಾಷ್ಟ್ರದ ಪ್ರಮುಖ ನಾಯಕರು ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ಸಿ. ಪಿ. ರಾಧಾಕೃಷ್ಣನ್, ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದರು. ಕೇಂದ್ರ ಸಚಿವರು, ಸಂಸದರು ಹಾಗೂ ವಿವಿಧ ಕ್ಷೇತ್ರಗಳ ನಾಯಕರು ಕೂಡ ಹಾಜರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಬಾಬಾಸಾಹೇಬರ ರಾಷ್ಟ್ರ ನಿರ್ಮಾಣದ ಕೊಡುಗೆ ಅಪಾರವಾಗಿದ್ದು, ಅವರ ಆದರ್ಶಗಳು ಸಮಾನತೆ ಮತ್ತು ನ್ಯಾಯಾಧಿಷ್ಠಿತ ಸಮಾಜ ನಿರ್ಮಾಣಕ್ಕೆ ನಿರಂತರವಾಗಿ ಪ್ರೇರಣೆ ನೀಡುತ್ತಿವೆ ಎಂದು ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande