
ಧಾರವಾಡ, 14 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 135 ನೇ ಜಯಂತಿ ಅಂಗವಾಗಿ ಧಾರವಾಡ ಜಿಲ್ಲಾಡಳಿತ, ಜಲ್ಲಾ ಪಂಚಾಯತ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ಆಯೋಜಿಸಿದ್ದ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರದ ಭವ್ಯ ಮೆರಣಿಗೆಗೆ ಇಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಕಾರ್ಮಿಕ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್.ಲಾಡ್ ಹಾಗೂ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಚಾಲನೆ ನೀಡಿದರು.
ವಿವಿಧ ಕಲಾತಂಡದೊಂದಿಗೆ ಡಾ.ಬಿ.ಆರ್.ಅಂಬೇಡ್ಕರ ಅವರ ಭಾವಚಿತ್ರದ ಭವ್ಯ ಮೆರವಣಿಗೆಯು ಜಿಲ್ಲಾಧಿಕಾರಿಗಳ ಕಚೇರಿ ಆವರಣದಿಂದ ಪ್ರಾರಂಭವಾಗಿ ಧಾರವಾಡ ನಗರದ ಕೋರ್ಟ ಸರ್ಕಲ್, ಸಂಗಮ ಸರ್ಕಲ್, ಮದಾರಮಡ್ಡಿ, ಭೂಸಪ್ಪ ಚೌಕ, ಮೇದಾರ ಓಣಿ, ಕೆ.ಸಿ.ಸಿ ಬ್ಯಾಂಕ್ ಮೂಲಕ ಕರ್ನಾಟಕ ವಿದ್ಯಾವರ್ಧಕ ಸಂಘದ ಡಾ. ಪಾಟೀಲ ಪುಟ್ಟಪ್ಪ ಸಭಾಭವನದವರೆಗೆ ಜರುಗಿತು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa