ಏಪ್ರಿಲ್ 20ರಂದು ಚಿತ್ರದುರ್ಗದಲ್ಲಿ ಬಸವೇಶ್ವರ ಜಯಂತಿ
ಚಿತ್ರದುರ್ಗ, 16 ಏಪ್ರಿಲ್ (ಹಿ.ಸ.) : ಆ್ಯಂಕರ್ : ಚಿತ್ರದುರ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆಯ ಸಂಯುಕ್ತಾಶ್ರಯದಲ್ಲಿ ಜಗಜ್ಯೋತಿ ಶ್ರೀ ಬಸವೇಶ್ವರ ಜಯಂತಿ ಸಮಾರಂಭವನ್ನು ಏಪ್ರಿಲ್ 20ರಂದು ಮಧ್ಯಾಹ್ನ 3 ಗಂಟೆಗೆ ಚಿತ್ರದುರ್ಗ ನಗರದ ಶ್ರೀ ನೀಲಕಂಠೇಶ್ವರ
ಏಪ್ರಿಲ್ 20ರಂದು ಚಿತ್ರದುರ್ಗದಲ್ಲಿ ಬಸವೇಶ್ವರ ಜಯಂತಿ


ಚಿತ್ರದುರ್ಗ, 16 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಚಿತ್ರದುರ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆಯ ಸಂಯುಕ್ತಾಶ್ರಯದಲ್ಲಿ ಜಗಜ್ಯೋತಿ ಶ್ರೀ ಬಸವೇಶ್ವರ ಜಯಂತಿ ಸಮಾರಂಭವನ್ನು ಏಪ್ರಿಲ್ 20ರಂದು ಮಧ್ಯಾಹ್ನ 3 ಗಂಟೆಗೆ ಚಿತ್ರದುರ್ಗ ನಗರದ ಶ್ರೀ ನೀಲಕಂಠೇಶ್ವರ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸದ ಗೋವಿಂದ ಎಂ.ಕಾರಜೋಳ ಸೇರಿದಂತೆ ಜಿಲ್ಲೆಯ ಹಲವು ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಶರಣ ಸಾಹಿತಿ ಪ್ರೊ.ಹೆಚ್.ಲಿಂಗಪ್ಪ ಉಪನ್ಯಾಸ ನೀಡಲಿದ್ದು, ಆಯಿತೋಳು ಗ್ರಾಮದ ಜಗದೀಶ್ ಮತ್ತು ತಂಡದಿಂದ ಗೀತಗಾಯನ ನಡೆಯಲಿದೆ.

ಜಯಂತಿ ಅಂಗವಾಗಿ ಸಂಜೆ 4.30ಕ್ಕೆ ಶ್ರೀ ನೀಲಕಂಠೇಶ್ವರಸ್ವಾಮಿ ದೇವಸ್ಥಾನದಿಂದ ವಿವಿಧ ಜಾನಪದ ಕಲಾತಂಡಗಳೊಂದಿಗೆ ಮೆರವಣಿಗೆ ನಡೆಯಲಿದ್ದು, ಆನೆಬಾಗಿಲು ದೊಡ್ಡಪೇಟೆ, ಮದಕರಿ ನಾಯಕ ವೃತ್ತ, ಅಂಬೇಡ್ಕರ್ ವೃತ್ತ ಹಾಗೂ ಗಾಂಧಿ ವೃತ್ತ ಮಾರ್ಗವಾಗಿ ಮೆರವಣಿಗೆ ಸಾಗಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande