
ಬೆಂಗಳೂರು, 16 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಗಾಂಧಿನಗರ ವಿಧಾನ ಸಭಾ ಕ್ಷೇತ್ರದ ದತ್ತಾತ್ರೇಯ ವಾರ್ಡ್ನಲ್ಲಿ ಆರ್. ಗುಂಡೂರಾವ್ ಫೌಂಡೇಷನ್ ಮತ್ತು ಜಿಬಿಎ ಸಹಯೋಗದಲ್ಲಿ ಸ್ವಚ್ಛತಾ ಆಂದೋಲನವನ್ನು ಹಮ್ಮಿಕೊಳ್ಳಲಾಯಿತು.
ಈ ಅಭಿಯಾನಕ್ಕೆ ನೇತೃತ್ವ ವಹಿಸಿದ ಸಚಿವ ದಿನೇಶ್ ಗುಂಡೂರಾವ್ ಅವರು ದತ್ತಾತ್ರೇಯ ವಾರ್ಡ್ನಾದ್ಯಂತ ಕಾಲ್ನಡಿಗೆಯ ಮೂಲಕ ಮನೆ ಮನೆಗೆ ತೆರಳಿ ಸಾರ್ವಜನಿಕರಿಗೆ ಕಸ ವಿಂಗಡಣೆ ಕುರಿತು ಜಾಗೃತಿ ಮೂಡಿಸಿದರು.
ಹಸಿ ಮತ್ತು ಒಣ ಕಸವನ್ನು ಪ್ರತ್ಯೇಕವಾಗಿ ವಿಂಗಡಿಸಿ ವಿಲೇವಾರಿ ಮಾಡುವ ಅಗತ್ಯತೆ, ಎಲ್ಲೆಂದರಲ್ಲಿ ಕಸ ಬಿಸಾಡುವುದರಿಂದ ಉಂಟಾಗುವ ಸಮಸ್ಯೆಗಳು ಹಾಗೂ ಸ್ವಚ್ಛತೆ ಕಾಪಾಡುವ ಮಹತ್ವದ ಕುರಿತು ಕರಪತ್ರಗಳನ್ನು ಹಂಚುವ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು.
ಸ್ವಚ್ಛತಾ ಅಭಿಯಾನದಲ್ಲಿ ಜಿಬಿಎ ಅಧಿಕಾರಿಗಳು, ಸ್ಥಳೀಯ ಮುಖಂಡರು, ಕಾರ್ಯಕರ್ತರು, ಸಾರ್ವಜನಿಕರು, ಪೌರ ಕಾರ್ಮಿಕರು ಹಾಗೂ ಜಿಬಿಎ ಮಾರ್ಷಲ್ಗಳು ಭಾಗವಹಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa