
ಶಿವಮೊಗ್ಗ, 16 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಏ.18 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.
ಈ ನೇರ ಸಂದರ್ಶನದಲ್ಲಿ ಮುತ್ತೂಟ್ ಫಿನ್ಕಾರ್ಪ್ ಮತ್ತು ಎ.ಯು.ಸ್ಮಾಲ್ ಫೈನಾನ್ಸ್ ಬ್ಯಾಂಕ್ ಕಂಪನಿಗಳು ಭಾಗವಹಿಸಲಿದ್ದು, ತಮ್ಮಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ.
ಪಿಯುಸಿ ಮತ್ತು ಯಾವುದೇ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಉಚಿತ ಪ್ರವೇಶ ಇರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, 2ನೇ ಕ್ರಾಸ್, ಪಂಪನಗರ, ಸಾಗರ ರಸ್ತೆ, ಶಿವಮೊಗ್ಗ ಇವರನ್ನು ಖುದ್ದಾಗಿ ಅಥವಾ ಮೊಬೈಲ್ ಸಂಖ್ಯೆ 9380663606/ 9108235132 ಗಳನ್ನು ಸಂಪರ್ಕಿಸುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa