
ಕೋಲಾರ, ೧೬ ಏಪ್ರಿಲ್ (ಹಿ.ಸ) :
ಆ್ಯಂಕರ್ : ಕೆಜಿಎಫ್ ಪೊಲೀಸ್ ಜಿಲ್ಲೆಯ ಬಂಗಾರಪೇಟೆ ಪೊಲೀಸರು ಗಾಂಜಾ ಮಾರಾಟ ಪ್ರಕರಣಕ್ಕೆ ಸಂಬ0ಧಿಸಿದ0ತೆ ಓರ್ವ ಆರೋಪಿಯನ್ನು ಬಂಧಿಸಿ, ಒಂದು ಲಕ್ಷ ಎಪ್ಪತ್ತೆöÊರು ಸಾವಿರ ಮೌಲ್ಯದ ೩ ಕೆ.ಜಿ ೧೮೦ ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಗಾರಪೇಟೆ ಪೊಲೀಸ್ ಠಾಣೆ ಸರಹದ್ದು, ಹುಣಸನಹಳ್ಳಿ ಬ್ರಿಡ್ಜ್ ಬಳಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಬಂದAತಹ ಖಚಿತ ಮಾಹಿತಿಯನ್ನು ಆಧರಿಸಿ, ಬಂಗಾರಪೇಟೆ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ರವಿಕುಮಾರ್ ಮತ್ತು ಸಿಬ್ಬಂದಿಗಳು ಕೂಡಲೆ ದಾಳಿ ನಡೆಸಿ, ಒಡಿಸ್ಸಾ ರಾಜ್ಯದ ಗಜಪತಿ ಜಿಲ್ಲೆಯ ವಾಸಿ ಸಿಮನ್ ಸಬರ್ ಬಿನ್ ಲಿಂಪೋ ಸಬರ್, ೨೯ ವರ್ಷ ಎಂಬಾತನನ್ನು ಬಂಧಿಸಿ, ಆತನಿಂದ ರೂ. ೧,೭೫,೦೦೦/- ಮೌಲ್ಯದ ೩ ಕೆ.ಜಿ. ೧೮೦ ಗ್ರಾಂ ಗಾಂಜಾ, ಒಂದು ಬ್ಯಾಗ್ ಮತ್ತು ಒಂದು ಮೊಬೈಲ್ ಫೋನ್ನ್ನು ವಶಪಡಿಸಿಕೊಂಡು, ಆರೋಪಿಯ ವಿರುದ್ದ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ಡಿವೈಎಸ್ಪಿ ವಿ.ಲಕ್ಷö್ಮಯ್ಯ ಮತ್ತು ಬಂಗಾರಪೇಟೆ ಇನ್ಸ್ಪೆಕ್ಟರ್ ರವಿಕುಮಾರ್.ಸಿ ರವರ ಮಾರ್ಗದರ್ಶನದಲ್ಲಿ ಆರೋಪಿಯನ್ನು ಬಂಧಿಸಿ, ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಪಿ.ಎಸ್.ಐ ರಾಜಣ್ಣ ಹಾಗೂ ಸಿಬ್ಬಂದಿಯಾದ ವೇಣುಗೋಪಾಲ್, ಅನಿಲ್, ಸುನಿಲ್, ಮುನಿರಾಜು, ಮಹೇಂದ್ರ ಕುಮಾರ್, ಮಂಜುನಾಥ ರವರುಗಳನ್ನೊಳಗೊಂಡ ತಂಡವು ಯಶಸ್ವಿಯಾಗಿದ್ದು, ತಂಡವನ್ನು ಪೊಲೀಸ್ ವರಿಷ್ಠಾಧಿಕಾರಿ ಶಿವಾಂಶು ರಜಪೂತ್ ಅವರು ಶ್ಲಾಘಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್