
ಕೋಲಾರ, ೧೬ ಏಪ್ರಿಲ್ (ಹಿ.ಸ) :
ಆ್ಯಂಕರ್ : ಮುಳಬಾಗಿಲು ತಾಲ್ಲೂಕಿನ ಮಲ್ಲನಾಯಕನಹಳ್ಳಿಯ ಸರ್ಕಾರಿ ಪದವಿಪೂರ್ವ ಕಾಲೇಜಿಗೆ ದ್ವಿತೀಯ ಪಿಯೂಸಿ ಪರೀಕ್ಷೆಯಲ್ಲಿ ಶೇಕಡ ೯೮ರಷ್ಟು ಫಲಿತಾಂಶ ಲಭಿಸಿದೆ. ಒಟ್ಟು ೪೨ ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ೪೧ ಮಂದಿ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಆ ಪೈಕಿ ೧೮ ಮಂದಿ ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಇಪ್ಪತ್ತೊಂದು ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ ಎಲ್ಲಾ ೨೮ ಮಂದಿ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಆ ಪೈಕಿ ೧೫ ಮಂದಿ ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಹನ್ನರೆಡು ಮಂದಿ ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಒಬ್ಬರು ದ್ವಿತೀಂiÀ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಕಲಾ ವಿಭಾಗದಲ್ಲಿ ಒಟ್ಟು ೧೪ ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ೧೩ ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಮೂವರು ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಒಂಬತ್ತು ಮಂದಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದರೆ. ಒಬ್ಬ ವಿದ್ಯಾರ್ಥಿನಿ ದ್ವಿತೀಯ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ ಜಯಲಕ್ಷಿö್ಮ ಎಸ್ ೫೭೧ ಅಂಕಗಳನ್ನು ವಿದ್ಯಾವತಿ ಆರ್.೫೬೪ ಅಂಕಗಳನ್ನು ಕೆ.ಎಂ.ಪಲ್ಲವಿ ೫೫೬ ಅಂಕಗಳನ್ನು ಗಳಿಸಿದ್ದಾರೆ. ಕಲಾ ವಿಭಾಗದಲ್ಲಿ ವೈಷ್ಣವಿ ಎಂ.೫೨೯ ಅಂಕಗಳನ್ನು ಗಳಿಸಿದ್ದಾರೆ.
ಎಲ್ಲಾ ವಿದ್ಯಾರ್ಥಿಗಳು ಗ್ರಾಮೀಣ ಹಿನ್ನಲೆ ಉಳ್ಳವರಾಗಿದ್ದಾರೆ. ವಿದ್ಯಾರ್ಥಿಗಳ ಸಾಧನೆಯನ್ನು ಪ್ರಾಂಶುಪಾಲರಾದ ಎನ್.ಸರೋಜ ದೇವಿ,ಉಪನ್ಯಾಸಕರಾದ ಬಿ.ಆರ್.ನಾರಾಯಣ ಸ್ವಾಮಿ, ಸೂರ್ಯ ಪ್ರಕಾಶ್, ದಾಕ್ಷಾಯಿಣಿ, ಶ್ರೀರಾಮ್, ಗಣೇಶ್, ಆನಂದ್ ಹಾಗು ಮೀನ, ಸಿಬ್ಬಂದಿ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಪದ್ಮನಾಭ ರಾವ್ ಶ್ಲಾಘಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್