ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ : ಯತೀಂದ್ರ ಸಿದ್ದರಾಮಯ್ಯ
ಸ್ಪಷ್ಟ
ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ : ಯತೀಂದ್ರ ಸಿದ್ದರಾಮಯ್ಯ


ಬೆಳಗಾವಿ, 16 ಏಪ್ರಿಲ್ (ಹಿ.ಸ.) :

ಆ್ಯಂಕರ್ : ತಮ್ಮ ತಂದೆ ಮುಖ್ಯಮಂತ್ರಿ ಆಗಿರುವವರೆಗೂ ತಾವು ಯಾವುದೇ ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ ಎಂದು ಯತೀಂದ್ರ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದ್ದಾರೆ.

ನಯಾನಗರ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನನ್ನ ತಂದೆ ಮುಖ್ಯಮಂತ್ರಿ ಆಗಿರುವಾಗ ನಾನು ಸಚಿವ ಸ್ಥಾನ ಕೇಳುವುದು ಸರಿಯಲ್ಲ. ನನಗಿಂತ ಅರ್ಹತೆ, ಅನುಭವ ಮತ್ತು ಹಿರಿಯತೆ ಹೊಂದಿರುವವರಿಗೆ ಸಚಿವ ಸ್ಥಾನ ಸಿಗಬೇಕು” ಎಂದು ಹೇಳಿದರು.

ಸಚಿವ ಸಂಪುಟದಲ್ಲಿ ಹೊಸಬರು ಹಾಗೂ ಅನುಭವಿಗಳಿಗೂ ಅವಕಾಶ ಸಿಗಬೇಕು ಎಂದು ಅಭಿಪ್ರಾಯಪಟ್ಟ ಅವರು, “ಈ ಬಾರಿ ಹೊಸ ಶಾಸಕರೂ ಸಚಿವ ಸ್ಥಾನಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ಯಾವುದೇ ಸಚಿವ ಸಂಪುಟದಲ್ಲಿ ಹೊಸಬರು ಮತ್ತು ಅನುಭವಿಗಳು ಇಬ್ಬರೂ ಇರುತ್ತಾರೆ. ಈ ಬಾರಿಯೂ ಅದೇ ರೀತಿಯಲ್ಲಿ ಅವಕಾಶ ನೀಡಲಾಗುತ್ತದೆ” ಎಂದರು.

ಪದೇ ಪದೇ ಮುಖ್ಯಮಂತ್ರಿ ಬದಲಾವಣೆ ಕುರಿತ ಚರ್ಚೆಗಳ ಬಗ್ಗೆ ಪ್ರತಿಕ್ರಿಯಿಸಿದ ಯತೀಂದ್ರ ಸಿದ್ದರಾಮಯ್ಯ, “ಯಾವುದೇ ಸರ್ಕಾರದಲ್ಲಿದ್ದರೂ ಇಂತಹ ಚರ್ಚೆಗಳು ನಡೆಯುವುದು ಸಹಜ ಎಂದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande