
ನವದೆಹಲಿ, 16 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಅವರು ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
“ಕರ್ನೂಲ್ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತ ತೀವ್ರ ನೋವುಂಟು ಮಾಡಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನಾನು ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.
ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಪರಿಹಾರ ಘೋಷಿಸಲಾಗಿದೆ. ಮೃತರ ಹತ್ತಿರದ ಸಂಬಂಧಿಕರಿಗೆ ತಲಾ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ ತಲಾ 50 ಸಾವಿರ ರೂ. ಆರ್ಥಿಕ ನೆರವು ನೀಡಲಾಗುವುದು ಎಂದು ಪ್ರಧಾನಿ ಕಚೇರಿ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa