
ಧಾರವಾಡ, 16 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಧಾರವಾಡ ಜಿಲ್ಲಾ ಪಂಚಾಯತ್ ಕಚೇರಿ ಎದುರು ಗ್ರಾಮ ಪಂಚಾಯತಿ ನೌಕರರು ವೈಜ್ಞಾನಿಕ ಕನಿಷ್ಠ ವೇತನ ಜಾರಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನೀಡಿದ್ದ ಭರವಸೆಗಳಂತೆ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.
ಗ್ರಾಮ ಪಂಚಾಯತಿ ನೌಕರರ ಸಂಘ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ, ನೌಕರರ ಸ್ಥಳೀಯ ಬೇಡಿಕೆಗಳ ಕುರಿತು ಚರ್ಚಿಸಲು ಸಭೆ ನಿಗದಿ ಮಾಡುವುದಾಗಿ ಉಪ ಕಾರ್ಯದರ್ಶಿಗಳು ಭರವಸೆ ನೀಡಿದ್ದಾರೆ.
ಪ್ರತಿಭಟನೆಯಲ್ಲಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ ಪತ್ತಾರ, ಸಂಘದ ಜಿಲ್ಲಾ ಗೌರವಾಧ್ಯಕ್ಷ ಬಿ.ಐ. ಈಳಿಗೇರ, ಜಿಲ್ಲಾಧ್ಯಕ್ಷ ಮಂಜುನಾಥ ದೊಡಮನಿ ಹಾಗೂ ಪ್ರಧಾನ ಕಾರ್ಯದರ್ಶಿ ಮಹೇಶ ಹುಲಗೋಡ ಸೇರಿದಂತೆ ಹಲವರು ಭಾಗವಹಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa