ಐಎಸ್ಐ ಬೆಂಬಲಿತ ಭಯೋತ್ಪಾದಕ ಜಾಲ ಭೇದಿಸಿದ ಪಂಜಾಬ್ ಪೋಲಿಸರು
ಅಮೃತಸರ, 16 ಏಪ್ರಿಲ್ (ಹಿ.ಸ.) : ಆ್ಯಂಕರ್ : ಪಂಜಾಬನಲ್ಲಿ ಪಾಕಿಸ್ತಾನ ಬೆಂಬಲಿತ ಗಡಿಯಾಚೆಗಿನ ಭಯೋತ್ಪಾದಕ ಜಾಲವನ್ನು ಭೇದಿಸುವಲ್ಲಿ ಪಂಜಾಬ್ ಪೋಲಿಸರು ಮಹತ್ವದ ಯಶಸ್ಸು ಸಾಧಿಸಿದ್ದಾರೆ. ಕೌಂಟರ್ ಇಂಟೆಲಿಜೆನ್ಸ್ ವಿಂಗ್ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಒಬ್ಬ ಆರೋಪಿಯನ್ನು ಬಂಧಿಸಿ ನಾಲ್ಕು ಹ್ಯಾಂಡ್ ಗ್
ಗ್ರೇನೆಡ್


ಅಮೃತಸರ, 16 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಪಂಜಾಬನಲ್ಲಿ ಪಾಕಿಸ್ತಾನ ಬೆಂಬಲಿತ ಗಡಿಯಾಚೆಗಿನ ಭಯೋತ್ಪಾದಕ ಜಾಲವನ್ನು ಭೇದಿಸುವಲ್ಲಿ ಪಂಜಾಬ್ ಪೋಲಿಸರು ಮಹತ್ವದ ಯಶಸ್ಸು ಸಾಧಿಸಿದ್ದಾರೆ. ಕೌಂಟರ್ ಇಂಟೆಲಿಜೆನ್ಸ್ ವಿಂಗ್ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಒಬ್ಬ ಆರೋಪಿಯನ್ನು ಬಂಧಿಸಿ ನಾಲ್ಕು ಹ್ಯಾಂಡ್ ಗ್ರೆನೇಡ್ಗಳು, ಎರಡು ವಿದೇಶಿ ನಿರ್ಮಿತ ಪಿಸ್ತೂಲ್ಗಳು ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪಂಜಾಬ್ ಡಿಜಿಪಿ ಮಾಹಿತಿ ನೀಡಿದ್ದಾರೆ.

ರಾಜ್ಯ ವಿಶೇಷ ಕಾರ್ಯಾಚರಣೆ ಕೋಶ ಅಮೃತಸರ ಮತ್ತು ಮೊಹಾಲಿ ಘಟಕಗಳು ನಡೆಸಿದ ದಾಳಿ ವೇಳೆ ಈ ಕಾರ್ಯಾಚರಣೆ ನಡೆದಿದ್ದು, ಬಂಧಿತ ವ್ಯಕ್ತಿ ವಿದೇಶಿ ಮೂಲದ ಹ್ಯಾಂಡ್ಲರ್ಗಳ ಸೂಚನೆ ಮೇರೆಗೆ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬುದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಇದೇ ವೇಳೆ, ಆರೋಪಿಗೆ ಪಾಕಿಸ್ತಾನದ ಐಎಸ್ಐ ಬೆಂಬಲಿತ ಭಯೋತ್ಪಾದಕ ಜಾಲದೊಂದಿಗೆ ನೇರ ಸಂಪರ್ಕವಿದ್ದು, ಇತ್ತೀಚೆಗೆ ಚಂಡೀಗಡದಲ್ಲಿ ನಡೆದ ಗ್ರೆನೇಡ್ ದಾಳಿಯಲ್ಲಿ ಭಾಗಿಯಾಗಿದ್ದ ಭಯೋತ್ಪಾದಕ ಮಾಡ್ಯೂಲ್ನೊಂದಿಗೂ ಸಂಪರ್ಕ ಹೊಂದಿದ್ದಾನೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

ಈ ಸಂಬಂಧ ಅಮೃತಸರ ರಾಜ್ಯ ವಿಶೇಷ ಕಾರ್ಯಾಚರಣೆ ಕೋಶ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಈ ಜಾಲದ ಇತರ ಸದಸ್ಯರನ್ನು ಗುರುತಿಸಿ ಬಂಧಿಸಲು ಮುಂದಿನ ತನಿಖೆ ನಡೆಯುತ್ತಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande