ಲೋಕ ಸಭಾ ಕ್ಷೇತ್ರಗಳ ಪುನರ್ವಿಂಗಡಣೆ ಅಭಿವೃದ್ಧಿಗೆ ಪೂರಕ : ಲಕ್ಷ್ಮಣ ಸವದಿ
ಬೆಳಗಾವಿ, 16 ಏಪ್ರಿಲ್ (ಹಿ.ಸ.) : ಆ್ಯಂಕರ್ : ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಅವರು ಲೋಕ ಸಭಾ ಕ್ಷೇತ್ರಗಳ ಪುನರ್ವಿಂಗಡಣೆ ಜನಪ್ರತಿನಿಧಿಗಳಿಗೆ ಜನಸಂಪರ್ಕ ಸುಲಭಗೊಳಿಸುವುದರ ಜೊತೆಗೆ ಅಭಿವೃದ್ಧಿ ದೃಷ್ಟಿಯಿಂದಲೂ ಪೂರಕವಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಅಥಣಿ ಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮ
ಲೋಕ ಸಭಾ ಕ್ಷೇತ್ರಗಳ ಪುನರ್ವಿಂಗಡಣೆ ಅಭಿವೃದ್ಧಿಗೆ ಪೂರಕ : ಲಕ್ಷ್ಮಣ ಸವದಿ


ಬೆಳಗಾವಿ, 16 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಅವರು ಲೋಕ ಸಭಾ ಕ್ಷೇತ್ರಗಳ ಪುನರ್ವಿಂಗಡಣೆ ಜನಪ್ರತಿನಿಧಿಗಳಿಗೆ ಜನಸಂಪರ್ಕ ಸುಲಭಗೊಳಿಸುವುದರ ಜೊತೆಗೆ ಅಭಿವೃದ್ಧಿ ದೃಷ್ಟಿಯಿಂದಲೂ ಪೂರಕವಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಅಥಣಿ ಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಸ್ತುತ ಲೋಕ ಸಭಾ ಕ್ಷೇತ್ರಗಳು ಭೌಗೋಳಿಕವಾಗಿ ಅತಿ ದೊಡ್ಡವಾಗಿರುವುದರಿಂದ ಮತದಾರರನ್ನು ತಲುಪುವುದು ಜನಪ್ರತಿನಿಧಿಗಳಿಗೆ ಸವಾಲಿನ ಕೆಲಸವಾಗಿದೆ ಎಂದು ಹೇಳಿದರು.

ಹೊಸ ನಿಯಮದ ಪ್ರಕಾರ ಒಂದು ವಿಧಾನಸಭಾ ಕ್ಷೇತ್ರಕ್ಕೆ ಸುಮಾರು ಎರಡು ಲಕ್ಷ ಮತದಾರರು ಹಾಗೂ ಒಂದು ಲೋಕಸಭಾ ಕ್ಷೇತ್ರಕ್ಕೆ ಎಂಟು ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಂತೆ ಒಟ್ಟು 16 ಲಕ್ಷ ಮತದಾರರ ಮಿತಿಯನ್ನು ನಿಗದಿಪಡಿಸುವ ಚಿಂತನೆ ನಡೆದಿದೆ ಎಂದು ಅವರು ತಿಳಿಸಿದರು.

ಈ ಮಾದರಿ ಜಾರಿಯಾದರೆ ಜನಪ್ರತಿನಿಧಿಗಳಿಗೆ ತಮ್ಮ ಕ್ಷೇತ್ರದ ಜನರೊಂದಿಗೆ ಹೆಚ್ಚು ಸಮೀಪ ಸಂಪರ್ಕ ಸಾಧಿಸಲು ಅನುಕೂಲವಾಗಲಿದೆ. ಜೊತೆಗೆ ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನ ಮತ್ತು ಜನರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ ನೀಡಲು ಸಹಕಾರಿ ಆಗಲಿದೆ ಎಂದು ಲಕ್ಷ್ಮಣ ಸವದಿ ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande