ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಗೆಲುವು ಖಚಿತ : ಪ್ರಭಾ ಮಲ್ಲಿಕಾರ್ಜುನ ವಿಶ್ವಾಸ
ನವದೆಹಲಿ, 17 ಏಪ್ರಿಲ್ (ಹಿ.ಸ.) : ಆ್ಯಂಕರ್ : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಬಹುಮತದಿಂದ ಗೆಲ್ಲಲಿದ್ದಾರೆ ಎಂಬ ವಿಶ್ವಾಸವನ್ನು ಸಂಸದೆ ಪ್ರಭಾ ಮಲ್ಲಿಕಾರ್ಜುನ ವ್ಯಕ್ತಪಡಿಸಿದರು. ನವದೆಹಲಿಯಲ್ಲಿ ಮಾತನಾಡಿದ ಅವರು ದಾವಣಗೆರೆ ದಕ್ಷಿಣ ಕ್ಷೇತ
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಗೆಲುವು ಖಚಿತ : ಪ್ರಭಾ ಮಲ್ಲಿಕಾರ್ಜುನ ವಿಶ್ವಾಸ


ನವದೆಹಲಿ, 17 ಏಪ್ರಿಲ್ (ಹಿ.ಸ.) :

ಆ್ಯಂಕರ್ : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಬಹುಮತದಿಂದ ಗೆಲ್ಲಲಿದ್ದಾರೆ ಎಂಬ ವಿಶ್ವಾಸವನ್ನು ಸಂಸದೆ ಪ್ರಭಾ ಮಲ್ಲಿಕಾರ್ಜುನ ವ್ಯಕ್ತಪಡಿಸಿದರು.

ನವದೆಹಲಿಯಲ್ಲಿ ಮಾತನಾಡಿದ ಅವರು ದಾವಣಗೆರೆ ದಕ್ಷಿಣ ಕ್ಷೇತ್ರ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿದ್ದು, ತಮ್ಮ ಮಾವನವರಾದ ಶಾಮನೂರು ಶಿವಶಂಕರಪ್ಪ ಅವರು ಈ ಕ್ಷೇತ್ರದಲ್ಲಿ ಸತತವಾಗಿ ಗೆದ್ದಿದ್ದಾರೆ ಎಂದು ಹೇಳಿದರು.

ಕ್ಷೇತ್ರದಲ್ಲಿ ಸಿಮೆಂಟ್ ರಸ್ತೆಗಳು, ಶಾಲೆಗಳು, ಆಶ್ರಯ ಯೋಜನೆಯ ಮನೆಗಳು, ಹಕ್ಕುಪತ್ರ ವಿತರಣೆ ಹಾಗೂ ಒಳಚರಂಡಿ ವ್ಯವಸ್ಥೆ ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಉಪಚುನಾವಣೆಯ ಪ್ರಚಾರಕ್ಕಾಗಿ ಕಾಂಗ್ರೆಸ್ ಪಕ್ಷದ ಎಲ್ಲ ನಾಯಕರು ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಬಂದಿದ್ದು, ಸ್ಥಳೀಯ ನಾಯಕರು ಮತ್ತು ಕಾರ್ಯಕರ್ತರು ಸಾಕಷ್ಟು ಕೆಲಸ ಮಾಡಿದ್ದಾರೆ. ಇದರಿಂದಾಗಿ ಕಾಂಗ್ರೆಸ್ ಗೆಲುವಿನ ಬಗ್ಗೆ ಸಂಪೂರ್ಣ ವಿಶ್ವಾಸವಿದೆ ಎಂದು ಹೇಳಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಎಲ್ಲ ವರ್ಗದ ಬಡ ಜನರಿಗೆ ತಲುಪಿಸಲಾಗಿದೆ ಎಂದು ಅವರು ತಿಳಿಸಿದರು.

ರಾಜಕೀಯದಲ್ಲಿ ಯುವ ನಾಯಕರಿಗೆ ಹೆಚ್ಚಿನ ಅವಕಾಶ ನೀಡಬೇಕಿದ್ದು, ಕಾಂಗ್ರೆಸ್ ಪಕ್ಷ ಯುವಕರಿಗೆ ಅವಕಾಶಗಳನ್ನು ಕಲ್ಪಿಸುತ್ತಿದೆ. ಯುವಜನತೆಗೆ ಯುವ ನಾಯಕತ್ವದ ಅಗತ್ಯವಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ರಾಜಕೀಯಕ್ಕೆ ಬರಬೇಕಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande