
ಹುಬ್ಬಳ್ಳಿ, 17 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಹುಬ್ಬಳ್ಳಿಯ ಬಸವೇಶ್ವರ ನಗರದ ಸಮುದಾಯ ಭವನದಲ್ಲಿ ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆಯ ವತಿಯಿಂದ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಶಾಸಕ ಮಹೇಶ ಟೆಂಗಿನಕಾಯಿ 'ಸುರಕ್ಷತಾ ಕಿಟ್'ಗಳ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ, ಸುರಕ್ಷತಾ ಕಿಟ್ ಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಪಾಲಿಕೆಯ ಸದಸ್ಯರಾದ ಶ್ರೀಮತಿ ವೀಣಾ ಚೇತನ ಬರದ್ವಾಡ, ಇಲಾಖೆಯ ಅಧಿಕಾರಿಗಳಾದ ಶ್ರೀಮತಿ ಮಾರಿಕಾಂಬಾ ಹುಲಕೋಟಿ, ಅಶೋಕ ಒಡೆಯರ ಹಾಗೂ ಇತರರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa