ನಿತಿನ್ ಗಡ್ಕರಿ ಭೇಟಿ ಮಾಡಿದ ಡಾ. ಪ್ರಭಾಕರ್ ಕೋರೆ
ಗೋಟೂರು
Met


ನವದೆಹಲಿ, 17 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಮಾಜಿ ರಾಜ್ಯ ಸಭಾ ಸಂಸದ ಡಾ.ಪ್ರಭಾಕರ ಕೋರೆ ಅವರು ಕೆಎಲ್ಇ ಸಂಸ್ಥೆಯ ನಿರ್ದೇಶಕ ವಿಜಯ ಮೆಟಗುಡ್ ಅವರೊಂದಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಕರ್ನಾಟಕದ ಎರಡು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಪ್ರಗತಿಗಾಗಿ ಮನವಿ ಸಲ್ಲಿಸಿದರು.

ಈ ಭೇಟಿ ವೇಳೆ ರೈತರ ಸುರಕ್ಷತೆ ಹಾಗೂ ಬೆಳಗಾವಿ ಜಿಲ್ಲೆಯ ರಸ್ತೆ ಮೂಲಸೌಕರ್ಯ ಅಭಿವೃದ್ಧಿಯ ವಿಷಯಗಳ ಮೇಲೆ ಪ್ರಮುಖವಾಗಿ ಚರ್ಚೆ ನಡೆಯಿತು.

ರಾಷ್ಟ್ರೀಯ ಹೆದ್ದಾರಿ-748A ಅಡಿಯಲ್ಲಿ ಸವದತ್ತಿ ತಾಲೂಕಿನ ಮರಕುಂಬಿ ಮತ್ತು ಹಿರೇಕೊಪ್ಪ ಗ್ರಾಮಗಳ ಬಳಿ ಹೊಸ ವಾಹನ ಕೆಳಸೇತುವೆ ನಿರ್ಮಿಸುವಂತೆ ಡಾ. ಕೋರೆ ಮನವಿ ಮಾಡಿದರು.

ಹೆದ್ದಾರಿ ವಿನ್ಯಾಸದಿಂದ ರೈತರ ಕೃಷಿ ಸಂಚಾರ ಹಾಗೂ ಸಾಂಪ್ರದಾಯಿಕ ಎತ್ತಿನ ಬಂಡಿಗಳ ದಾರಿಗೆ ಅಡ್ಡಿಯಾಗದಂತೆ ಕ್ರಮ ಕೈಗೊಳ್ಳುವ ಅಗತ್ಯವನ್ನು ಅವರು ಸಚಿವರ ಗಮನಕ್ಕೆ ತಂದರು.

ಅದೇ ರೀತಿ ರಾಷ್ಟ್ರೀಯ ಹೆದ್ದಾರಿ-548B ಅಡಿಯಲ್ಲಿ ಅಥಣಿ ತಾಲೂಕಿನ ಮುರಗುಂಡಿಯಿಂದ ಹುಕ್ಕೇರಿ ತಾಲೂಕಿನ ಗೋಟೂರುವರೆಗಿನ ರಸ್ತೆ ಅಗಲೀಕರಣ ಕಾರ್ಯವನ್ನು ವೇಗಗೊಳಿಸುವಂತೆ ಅವರು ಒತ್ತಾಯಿಸಿದರು.

ಈ ಯೋಜನೆ ಕರ್ನಾಟಕ–ಮಹಾರಾಷ್ಟ್ರ ನಡುವಿನ ಪ್ರಮುಖ ಸಂಪರ್ಕ ಮತ್ತು ಪ್ರಾದೇಶಿಕ ಆರ್ಥಿಕ ಚಟುವಟಿಕೆಗಳಿಗೆ ಅತ್ಯಂತ ಅಗತ್ಯವಾಗಿದೆ ಎಂದು ವಿವರಿಸಿದರು.

ರೈತರ ಹಿತದೃಷ್ಟಿಯಿಂದ ಹಾಗೂ ಉಭಯ ರಾಜ್ಯಗಳ ನಡುವಿನ ಸಂಪರ್ಕವನ್ನು ಬಲಪಡಿಸುವ ನಿಟ್ಟಿನಲ್ಲಿ ಈ ವಿಷಯಗಳನ್ನು ಶೀಘ್ರವಾಗಿ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಭರವಸೆ ನೀಡಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande