
ಬೆಂಗಳೂರು, 17 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಬೆಂಗಳೂರು ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿ ಡ್ರಗ್ಸ್ ಜಾಲ ವಿಸ್ತರಿಸುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಹಲವು ಪೊಲೀಸ್ ಕಾರ್ಯಾಚರಣೆಗಳು ನಡೆದರೂ ಮಾದಕ ವಸ್ತುಗಳ ಹಾವಳಿ ಸಂಪೂರ್ಣ ನಿಯಂತ್ರಣಕ್ಕೆ ಬಂದಿಲ್ಲ ಎಂದು ರಾಜ್ಯ ಬಿಜೆಪಿ ಘಟಕ ಆರೋಪಿದೆ.
ಅಪ್ರಾಪ್ತರು ಕೂಡ ಮಾದಕ ವಸ್ತುಗಳ ಜಾಲಕ್ಕೆ ಸೆಳೆಯಲ್ಪಡುತ್ತಿರುವುದು ಸಮಾಜದಲ್ಲಿ ಕಳವಳ ಮೂಡಿಸಿದೆ. ಡ್ರಗ್ಸ್ ಬಳಕೆ ಮತ್ತು ಮಾರಾಟದ ವಿರುದ್ಧ ಇನ್ನಷ್ಟು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ.
ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ ಸರಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಡ್ರಗ್ಸ್ ಜಾಲವನ್ನು ನಿಯಂತ್ರಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದೆ.
ರಾಜ್ಯದ ವಿವಿಧ ಭಾಗಗಳಲ್ಲಿ ಡ್ರಗ್ಸ್ ಫ್ಯಾಕ್ಟರಿಗಳು ಅಣಬೆಯಂತೆ ಬೆಳೆಯುತ್ತಿದೆಯಾದರೂ, ಸರ್ಕಾರ ಮತ್ತು ಗೃಹ ಇಲಾಖೆ ಸಮರ್ಪಕ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಬಿಜೆಪಿ ಟೀಕಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa