
ಮೈಸೂರು, 17 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಮೈಸೂರು ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಮೈದಾನದಲ್ಲಿ ನಡೆದ ವಾರದ ಕವಾಯತ್ತಿನಲ್ಲಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲಂದಂಡಿ ಗೌರವ ವಂದನೆ ಸ್ವೀಕರಿಸಿ ಕವಾಯತು ಪರಿವೀಕ್ಷಣೆ ನಡೆಸಿದರು.
ಈ ಸಂದರ್ಭದಲ್ಲಿ ಹಾಜರಿದ್ದ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಅಗತ್ಯ ಸಲಹೆ-ಸೂಚನೆಗಳನ್ನು ನೀಡಿದ ಅವರು, ಸಿಬ್ಬಂದಿಗಳ ಕುಂದು-ಕೊರತೆಗಳನ್ನು ಆಲಿಸಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa