
ಬೆಂಗಳೂರು, 17 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಬೇಸಿಗೆಯ ತೀವ್ರತೆಯಿಂದ ನೀರಿನ ಅಭಾವ ಉಂಟಾಗುವ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು, ದಿನೇಶ್ ಗುಂಡೂರಾವ್ ಅವರು ಗಾಂಧಿನಗರ ವಿಧಾನ ಸಭಾ ಕ್ಷೇತ್ರದ ದತ್ತಾತ್ರೇಯ ವಾರ್ಡ್ ನಿವಾಸಿಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸುವ ನಿಟ್ಟಿನಲ್ಲಿ ನೂತನ ಬೋರ್ವೆಲ್ ಕೊರೆಯುವ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.
ಬೇಸಿಗೆಯಲ್ಲಿ ಸಾರ್ವಜನಿಕರಿಗೆ ನೀರಿನ ತೊಂದರೆ ಉಂಟಾಗದಂತೆ ಸ್ಥಳೀಯ ಮಟ್ಟದಲ್ಲಿ ಬೋರ್ವೆಲ್ ನೀರಾವರಿ ವ್ಯವಸ್ಥೆಯನ್ನು ಬಲಪಡಿಸುವುದು ಅಗತ್ಯವಾಗಿದೆ ಎಂದು ಅವರು ತಿಳಿಸಿದರು. ಈಗಾಗಲೇ ಕಾವೇರಿ ನೀರು ಪೂರೈಕೆಯಾಗುತ್ತಿದ್ದರೂ, ಹೆಚ್ಚುವರಿ ನೀರಿನ ಮೂಲಗಳನ್ನು ಅಭಿವೃದ್ಧಿಪಡಿಸುವ ಮೂಲಕ ಪ್ರತಿಯೊಂದು ಮನೆಗೂ ದಿನನಿತ್ಯದ ನೀರಿನ ಪೂರೈಕೆಯನ್ನು ಖಚಿತಪಡಿಸುವುದು ಮೊದಲ ಆದ್ಯತೆಯಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಬಿಎ ಅಧಿಕಾರಿಗಳು, ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa