
ಜೋಯಿಡಾ, 17 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಆರ್.ವಿ. ದೇಶಪಾಂಡೆ ಅವರು ಜೋಯಿಡಾದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಉನ್ನತ ಅಧಿಕಾರಿಗಳೊಂದಿಗೆ ಅಭಿವೃದ್ಧಿ ಕಾರ್ಯಗಳ ಪ್ರಗತಿ ಕುರಿತು ಪರಿಶೀಲನೆ ನಡೆಸಿದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಜೋಯಿಡಾ ತಾಲೂಕು ವ್ಯಾಪ್ತಿಯ ಕುಡಿಯುವ ನೀರಿನ ಲಭ್ಯತೆ, ಗ್ರಾಮೀಣ ಹಾಗೂ ನಗರ ಪ್ರದೇಶಗಳ ಸ್ವಚ್ಛತಾ ವ್ಯವಸ್ಥೆ, ರಸ್ತೆ ದುರಸ್ತಿ ಹಾಗೂ ನೂತನ ಕಾಮಗಾರಿಗಳು, ಆರೋಗ್ಯ ಕೇಂದ್ರಗಳು ಸೇರಿದಂತೆ ಸಾರ್ವಜನಿಕ ಮೂಲಸೌಕರ್ಯಗಳ ಅಭಿವೃದ್ಧಿ ಕುರಿತಂತೆ ಇಲಾಖಾವಾರು ಪ್ರಗತಿ ವರದಿಗಳನ್ನು ಅಧಿಕಾರಿಗಳಿಂದ ಪಡೆದುಕೊಳ್ಳಲಾಯಿತು.
ತಾಲೂಕಿನ ವಿವಿಧ ಕಾಮಗಾರಿಗಳ ಅಂತಿಮ ಹಂತದ ಪ್ರಗತಿಯನ್ನು ಪರಿಶೀಲಿಸಿದ ಶಾಸಕ ದೇಶಪಾಂಡೆ ಅವರು, ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಗುಣಮಟ್ಟದೊಂದಿಗೆ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಶೀಘ್ರವಾಗಿ ತಲುಪುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕುಡಿಯುವ ನೀರು, ಆರೋಗ್ಯ, ರಸ್ತೆ ಮತ್ತು ಸ್ವಚ್ಛತೆ ಮೊದಲಾದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಅವರು ಅಧಿಕಾರಿಗಳಿಗೆ ತಿಳಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa