
ಚಾಮರಾಜನಗರ, 17 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಮುಖ್ಯಮಂತ್ರಿಗಳು ಏಪ್ರಿಲ್ 21ರಂದು ಗುಂಡ್ಲುಪೇಟೆ ತಾಲೂಕಿಗೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಸಿದ್ಧತೆಗಳನ್ನು ಆರಂಭಿಸಿದೆ.
ಈ ಹಿನ್ನೆಲೆ ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಗುಂಡ್ಲುಪೇಟೆಗೆ ಭೇಟಿ ನೀಡಿ ಹೆಲಿಪ್ಯಾಡ್ ಸ್ಥಳ, ವೇದಿಕೆ ಕಾರ್ಯಕ್ರಮ ನಡೆಯುವ ಸ್ಥಳ ಹಾಗೂ ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಕುರಿತಂತೆ ಪರಿಶೀಲನೆ ನಡೆಸಿದರು.
ಮುಖ್ಯಮಂತ್ರಿಗಳ ಭೇಟಿ ಸಂದರ್ಭದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮಗಳು ನಡೆಯಲಿರುವುದರಿಂದ ಭದ್ರತೆ ಮತ್ತು ಸಾರ್ವಜನಿಕ ಸೌಕರ್ಯಗಳ ಕುರಿತು ಅಧಿಕಾರಿಗಳು ಸೂಕ್ಷ್ಮವಾಗಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಜಿಲ್ಲಾಧಿಕಾರಿಗಳು ಉಪಸ್ಥಿತರಿದ್ದು, ಕಾರ್ಯಕ್ರಮ ಯಶಸ್ವಿಯಾಗಿ ನಡೆಯುವ ನಿಟ್ಟಿನಲ್ಲಿ ಅಗತ್ಯ ಸಿದ್ಧತೆಗಳ ಬಗ್ಗೆ ಚರ್ಚಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa