ಯೋಗೇಶ್ ಗೌಡ ಹತ್ಯೆ ಪ್ರಕರಣ ; ಕೊನೆಗೂ ಸತ್ಯಕ್ಕೆ ಜಯ : ಬಿಜೆಪಿ
ಬೆಂಗಳೂರು, 17 ಏಪ್ರಿಲ್ (ಹಿ.ಸ.) : ಆ್ಯಂಕರ್ : ಧಾರವಾಡದ ಬಿಜೆಪಿ ಮುಖಂಡ ಹಾಗೂ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿರುವ ತೀರ್ಪು , ಕೊನೆಗೂ ಸತ್ಯಕ್ಕೆ ಜಯ ದೊರೆತಿದೆ” ಎಂದು ರಾಜ್ಯ ಬಿಜೆಪಿ ಘಟಕ ಪ್ರತಿಕ್ರಿಯಿಸಿದೆ.
ಯೋಗೇಶ್ ಗೌಡ ಹತ್ಯೆ ಪ್ರಕರಣ ; ಕೊನೆಗೂ ಸತ್ಯಕ್ಕೆ ಜಯ : ಬಿಜೆಪಿ


ಬೆಂಗಳೂರು, 17 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಧಾರವಾಡದ ಬಿಜೆಪಿ ಮುಖಂಡ ಹಾಗೂ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿರುವ ತೀರ್ಪು , ಕೊನೆಗೂ ಸತ್ಯಕ್ಕೆ ಜಯ ದೊರೆತಿದೆ” ಎಂದು ರಾಜ್ಯ ಬಿಜೆಪಿ ಘಟಕ ಪ್ರತಿಕ್ರಿಯಿಸಿದೆ.

ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದ ನಿರ್ಧಾರವೇ ಸತ್ಯ ಹೊರಬರಲು ಕಾರಣವಾಗಿದ್ದು, ದೀರ್ಘ ಹೋರಾಟದ ನಂತರ ನ್ಯಾಯ ದೊರೆತಿದೆ ಎಂದು ಅಭಿಪ್ರಾಯಪಟ್ಟಿದೆ.

ಈ ತೀರ್ಪು ರಾಜಕೀಯ ದ್ವೇಷದಿಂದ ನಡೆಯುವ ಹಿಂಸಾಚಾರಗಳಿಗೆ ಎಚ್ಚರಿಕೆಯ ಸಂದೇಶವಾಗಿದೆ ಎಂದು ತಿಳಿಸಿದೆ. “ರಾಜಕೀಯ ಕಾರಣಗಳಿಂದ ಜೀವ ತೆಗೆಯುವ ಮನೋಭಾವಕ್ಕೆ ಇದು ಸ್ಪಷ್ಟ ಎಚ್ಚರಿಕೆ ಘಂಟೆ” ಎಂದು ಪಕ್ಷ ಹೇಳಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande