
ಮಂಡ್ಯ, 17 ಏಪ್ರಿಲ್ (ಹಿ.ಸ.) :
ಆ್ಯಂಕರ್ : ರಾಜ್ಯ ಮಹಿಳಾ ಆಯೋಗದ ವತಿಯಿಂದ “ನಿಮ್ಮ ಮನೆ ಬಾಗಿಲಿಗೆ ಮಹಿಳಾ ಆಯೋಗ” ಕಾರ್ಯಕ್ರಮದಡಿ ಮಂಡ್ಯ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಸಾರ್ವಜನಿಕ ಅಹವಾಲು ಸಭೆ ನಡೆಯಿತು.
ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ. ನಾಗಲಕ್ಷ್ಮಿ ಚೌಧರಿ ಅವರು ಸಭೆಯಲ್ಲಿ ಭಾಗವಹಿಸಿ ವಿವಿಧ ಮಹಿಳೆಯರ ಅಹವಾಲುಗಳನ್ನು ಸ್ವೀಕರಿಸಿದರು. ಮಹಿಳೆಯರ ಸಮಸ್ಯೆಗಳು, ಕಾನೂನು ಸಂಬಂಧಿತ ದೂರುಗಳು ಹಾಗೂ ಸಾಮಾಜಿಕ ಅಸಮಾನತೆಗಳಿಗೆ ಸಂಬಂಧಿಸಿದ ವಿಷಯಗಳನ್ನು ಅವರು ಆಲಿಸಿದರು.
ಸಭೆಯಲ್ಲಿ ಮಂಡ್ಯ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಇಓ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa