
ಬಾಗಲಕೋಟೆ, 18 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಅಕ್ಕ ಪಡೆ ವತಿಯಿಂದ ಬಾಗಲಕೋಟೆ ಬಸ್ ನಿಲ್ದಾಣ ದಲ್ಲಿ ಮಹಿಳೆಯರು ಹಾಗೂ ಮಕ್ಕಳಿಗಾಗಿ ವಿವಿಧ ಸಾಮಾಜಿಕ ವಿಷಯಗಳ ಕುರಿತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ರಸ್ತೆ ಸುರಕ್ಷತೆ, ಸೈಬರ್ ಸುರಕ್ಷತೆ, ಮಾದಕ ದ್ರವ್ಯಗಳ ಸೇವನೆಯಿಂದಾಗುವ ದುಷ್ಪರಿಣಾಮಗಳು, ಬಾಲ್ಯ ವಿವಾಹದ ಹಾನಿಗಳು ಹಾಗೂ ಸಂಚಾರ ನಿಯಮಗಳ ಪಾಲನೆಯ ಅಗತ್ಯತೆ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು.
ಕಾರ್ಯಕ್ರಮದಲ್ಲಿ ಮಹಿಳೆಯರು ಮತ್ತು ಮಕ್ಕಳಿಗೆ ಸುರಕ್ಷಿತ ಜೀವನಶೈಲಿ, ಕಾನೂನು ಅರಿವು ಹಾಗೂ ಸಾಮಾಜಿಕ ಜವಾಬ್ದಾರಿಗಳ ಬಗ್ಗೆ ತಿಳಿಹೇಳಲಾಯಿತು. ವಿಶೇಷವಾಗಿ, ರಸ್ತೆ ಅಪಘಾತಗಳನ್ನು ತಡೆಯಲು ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮನವಿ ಮಾಡಲಾಯಿತು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa