ಶಿವಮೊಗ್ಗ, ವಿಜಯಪುರದಲ್ಲಿ ಬಾಲ ಕಾರ್ಮಿಕರ ತಪಾಸಣೆ
ಶಿವಮೊಗ್ಗ, 18 ಏಪ್ರಿಲ್ (ಹಿ.ಸ.) : ಆ್ಯಂಕರ್ : ಶಿವಮೊಗ್ಗ ನಗರದಲ್ಲಿ ಶಾಲೆಗಳಿಗೆ ರಜೆ ಇರುವ ಹಿನ್ನೆಲೆ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರನ್ನು ತಡೆಗಟ್ಟುವ ನಿಟ್ಟಿನಲ್ಲಿ ಗ್ಯಾರೇಜ್ಗಳು ಮತ್ತು ಶೋರೂಮ್ಗಳಲ್ಲಿ ವಿಶೇಷ ತಪಾಸಣೆ ನಡೆಸಲಾಯಿತು. ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಕಾಯ್ದೆಯಡಿ ಅಧಿಕಾ
Checking


ಶಿವಮೊಗ್ಗ, 18 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಶಿವಮೊಗ್ಗ ನಗರದಲ್ಲಿ ಶಾಲೆಗಳಿಗೆ ರಜೆ ಇರುವ ಹಿನ್ನೆಲೆ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರನ್ನು ತಡೆಗಟ್ಟುವ ನಿಟ್ಟಿನಲ್ಲಿ ಗ್ಯಾರೇಜ್ಗಳು ಮತ್ತು ಶೋರೂಮ್ಗಳಲ್ಲಿ ವಿಶೇಷ ತಪಾಸಣೆ ನಡೆಸಲಾಯಿತು.

ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಕಾಯ್ದೆಯಡಿ ಅಧಿಕಾರಿಗಳು ವಿವಿಧ ವಾಣಿಜ್ಯ ಕೇಂದ್ರಗಳಲ್ಲಿ ಪರಿಶೀಲನೆ ನಡೆಸಿ, ಅಪ್ರಾಪ್ತ ವಯಸ್ಸಿನ ಮಕ್ಕಳು ಕೆಲಸಕ್ಕೆ ತೊಡಗಿಸಿಕೊಳ್ಳಲಾಗಿದೆಯೇ ಎಂಬುದನ್ನು ಪರಿಶೀಲಿಸಿದರು. ಶಾಲಾ ರಜೆಯ ಅವಧಿಯಲ್ಲಿ ಮಕ್ಕಳು ಕೆಲಸಕ್ಕೆ ತೊಡಗುವ ಸಾಧ್ಯತೆ ಹೆಚ್ಚಿರುವುದರಿಂದ ಇಂತಹ ದಾಳಿಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದೇ ವೇಳೆ, ವಿಜಯಪುರ ಜಿಲ್ಲೆಯ ತಾಜಪುರ ಗ್ರಾಮದಲ್ಲಿ ಅನಿರೀಕ್ಷಿತ ದಾಳಿ ನಡೆಸಲಾಯಿತು. ಬಾಲಕಾರ್ಮಿಕ ಪದ್ಧತಿ ತಡೆಗಟ್ಟುವ ಉದ್ದೇಶದಿಂದ ವಿವಿಧ ಅಂಗಡಿಗಳು ಮತ್ತು ವ್ಯಾಪಾರ ಕೇಂದ್ರಗಳಲ್ಲಿ ಪರಿಶೀಲನೆ ನಡೆಸಿ, ಬಾಲಕಾರ್ಮಿಕರನ್ನು ಕೆಲಸಕ್ಕೆ ನೇಮಿಸದಂತೆ ಎಚ್ಚರಿಕೆ ನೀಡಲಾಯಿತು.

ಅಲ್ಲದೆ, ಬಾಲಕಾರ್ಮಿಕ ಪದ್ಧತಿ ವಿರುದ್ಧ ಜಾಗೃತಿ ಮೂಡಿಸುವ ಸಲುವಾಗಿ ಸ್ಟಿಕ್ಕರ್ಗಳನ್ನು ಅಂಟಿಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು. ಮಕ್ಕಳನ್ನು ಶಿಕ್ಷಣದಿಂದ ದೂರವಿಡದೇ ಶಾಲೆಗೆ ಕಳುಹಿಸುವಂತೆ ಅಧಿಕಾರಿಗಳು ಪೋಷಕರಿಗೆ ಮನವಿ ಮಾಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande