
ಬೆಂಗಳೂರು, 18 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಕರ್ನಾಟಕವು ಐತಿಹಾಸಿಕ, ಸಾಂಸ್ಕೃತಿಕ ಹಾಗೂ ಪ್ರಾಕೃತಿಕ ತಾಣಗಳ ತವರಾಗಿದ್ದು, ಅವುಗಳ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ವಿಶ್ವ ಪಾರಂಪರಿಕ ದಿನ ಅಂಗವಾಗಿ ಎಕ್ಸನಲ್ಲಿ ಶುಭಾಶಯ ಸಂದೇಶ ಹಂಚಿಕೊಂಡಿರುವ ಅವರು, ಕರ್ನಾಟಕದ ಪಾರಂಪರಿಕ ತಾಣಗಳ ಐತಿಹಾಸಿಕ ಹಾಗೂ ಸಾಂಸ್ಕೃತಿಕ ಮಹತ್ವವನ್ನು ಸ್ಮರಿಸಿದ್ದಾರೆ.
ಹಂಪಿ, ಬಾದಾಮಿ, ಐಹೊಳೆ, ಪಟ್ಟದಕಲ್ಲು, ಬೇಲೂರು ಹಾಗೂ ಹಳೆಬೀಡು ಮುಂತಾದ ತಾಣಗಳು ಕರ್ನಾಟಕದ ಶ್ರೀಮಂತ ಇತಿಹಾಸ, ವಾಸ್ತುಶಿಲ್ಪ ಮತ್ತು ಕಲಾಸೌಂದರ್ಯದ ಪ್ರತೀಕಗಳಾಗಿವೆ ಎಂದು ಅವರು ಹೇಳಿದ್ದಾರೆ.
ಇದೇ ವೇಳೆ, ಪಶ್ಚಿಮ ಘಟ್ಟಗಳು ಪರ್ವತ ಶ್ರೇಣಿಯ ಜೀವ ವೈವಿಧ್ಯತೆ, ನೈಸರ್ಗಿಕ ಸೌಂದರ್ಯ ಹಾಗೂ ಪರಿಸರ ಮಹತ್ವವೂ ರಾಜ್ಯದ ಹೆಮ್ಮೆಯಾಗಿದೆ ಎಂದು ಮುಖ್ಯಮಂತ್ರಿ ಉಲ್ಲೇಖಿಸಿದ್ದಾರೆ.
ನಮ್ಮ ಸುತ್ತಲಿನ ಪಾರಂಪರಿಕ ತಾಣಗಳಿಗೆ ಭೇಟಿ ನೀಡಿ, ಅವುಗಳ ಇತಿಹಾಸ ಮತ್ತು ಮಹತ್ವವನ್ನು ಅರಿಯಬೇಕು. ಅಲ್ಲಿನ ಸೌಂದರ್ಯವನ್ನು ಕಣ್ತುಂಬಿಕೊಂಡು, ಮುಂದಿನ ತಲೆಮಾರಿಗೆ ಈ ಪರಂಪರೆಯನ್ನು ಉಳಿಸುವ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದು ಅವರು ಕರೆ ನೀಡಿದ್ದಾರೆ.
ಸಂಸ್ಕೃತಿ, ಇತಿಹಾಸ ಮತ್ತು ಪರಂಪರೆಯ ರಕ್ಷಣೆಗೆ ವಿಶ್ವ ಪಾರಂಪರಿಕ ದಿನವು ಪ್ರೇರಣೆಯಾಗಲಿ ಎಂದು ಮುಖ್ಯಮಂತ್ರಿ ಆಶಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa